ವಿಜಯಪುರ: ಕಬ್ಬು ಸಾಗಿಸುವ ಟ್ರ್ಯಾಕ್ಟರ್ ಸೇರಿದಂತೆ ರೈತರ ವಾಹನಗಳಿಗೆ ಶುಲ್ಕ ಹಾಕಿಸುತ್ತಿರುವ ಹಿಟ್ನಳ್ಳಿ ಬಳಿಯ ಟೋಲ್ ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ವಿಜಯಪುರ ನಗರಕ್ಕೆ ಹೊಂದಿಕೊಂಡಿರುವ ಹಿಟ್ನಳ್ಳಿ ಗ್ರಾಮದ ರೈತರು ಟೋಲ್ ಮೂಲಕ ಕಬ್ಬು ಸಾಗಿಸುವ ಟ್ರ್ಯಾಕ್ಟರ್ ಗೆ ಶುಲ್ಕ ಕಟ್ಟುವುದನ್ನು ವಿರೋಧಿಸಿ ಟೋಲ್ ಗೇಟ್ ಬಂದ್ ಮಾಡಿ ಮಂಗಳವಾರ ಬೆಳಿಗ್ಗೆ ಪ್ರತಿಭಟನೆಗೆ ಇಳಿದರು.
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗಳನ್ನು ಟೋಲ್ ನಾಕಾ ರಸ್ತೆಗಳಿಗೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ಹಿಟ್ನಳ್ಳಿ ಗ್ರಾಮದ ರೈತರು, ರೈತರ ವಾಹನಗಳಿಗೆ ಶುಲ್ಕ ರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದರು.
ಇದರಿಂದಾಗಿ ವಿಜಯಪುರ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-50 ರ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಟೋಲ್ ನಾಕಾ ಅಧಿಕಾರಿಗಳು ಹಾಗೂ ರೈತರೊಂದಿಗೆ ಬುಧವಾರ ಜಂಟಿ ಸಭೆ ನಡೆಸಿ, ಸಮಸ್ಯೆ ಇತ್ಯರ್ಥ ಮಾಡುವ ಭರವಸೆ ನೀಡಿದರು.
ಪೊಲೀಸರು ಮಧ್ಯಸ್ಥಿಕೆ ವಹಿಸಿ ಸಮಾಧಾನಿಸಿದ್ದತಿಂದ ರೈತರು ಪ್ರತಿಭಟನೆ ಹಿಂಪಡೆದರು.
ಇದನ್ನೂ ಓದಿ: Indian Navy: ಕಡಲ್ಗಳ್ಳರಿಂದ 19 ಪಾಕಿಸ್ತಾನಿ ನಾವಿಕರನ್ನು ರಕ್ಷಿಸಿದ ಭಾರತೀಯ ನೌಕಾಪಡೆ