Advertisement

ಮಸ್ಕಿಯಲ್ಲಿ ಗಂಭೀರ ಸ್ವರೂಪ ಪಡೆದ ಹಣ ಹಂಚಿಕೆ ಪ್ರಕರಣ: ಕಾಂಗ್ರೆಸ್ ಪ್ರತಿಭಟನೆ

02:41 PM Apr 09, 2021 | Team Udayavani |

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚಿಕೆ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಕಾಂಗ್ರೆಸ್ ಶಾಸಕರು, ಮುಖಂಡರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

Advertisement

ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ‌ ಒಂದು ವೋಟಿಗೆ 200 ರೂಪಾಯಿ ಹಣ ಹಂಚಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು ಹೋರಾಟಕ್ಕಿಳಿದರು. ಈ ವೇಳೆ ಚುನಾವಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು.

ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ರನ್ನು ಸ್ಪರ್ಧೆಯಿಂದ ಅನರ್ಹಗೊಳಿಸುವಂತೆ ಒತ್ತಾಯಿಸಿದ ಮುಖಂಡರು ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ದವೂ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಬೆಂಗಳೂರು-ಮಂಗಳೂರು ವಿಶೇಷ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ!

ಮಸ್ಕಿಯಲ್ಲಿ ಬಿಜೆಪಿ ಸರ್ಕಾರವಿಲ್ಲ. ಸದ್ದಾಂ ಸರ್ಕಾರವಿದೆ. ಹಣ ಹಂಚಿಕೆ ಮಾಹಿತಿ ನೀಡಿದರೂ ಪೊಲೀಸರು ಕ್ರಮಕ್ಕೆ ಮುಂದಾಗುತ್ತಿಲ್ಲ. ಪೊಲೀಸ್ ಅಧಿಕಾರಿಗಳಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಬಳಗಾನೂರು, ತುರವಿಹಾಳ ಗ್ರಾಮದಲ್ಲಿ ಹಣ ಹಂಚಿಕೆ ಮಾಡಿದವರ ವಿರುದ್ದ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚುನಾವಣಧಿಕಾರಿ ಕಚೇರಿ ಎದುರು ಧರಣಿ ಕುಳಿತರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಾಜಿ ಸಚಿವ ಆಂಜನೇಯ, ಎನ್ ಎಸ್.ಬೋಸರಾಜ್, ಬಿ.ವಿ.ನಾಯಕ ಸೇರಿ ನೂರಾರು ಕಾರ್ಯಕರ್ತರು ಸೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next