Advertisement

ರೈತ ಸಂಘದಿಂದ ಪ್ರತಿಭಟನೆ

03:57 PM Jun 16, 2020 | Suhan S |

ಕುಷ್ಟಗಿ: ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳಿಗೆ ಒಪ್ಪಿಸುವಂತಹ ತಿದ್ದುಪಡಿ ಕಾಯ್ದೆ ಎಂದು ಆರೋಪಿಸಿ, ಅದನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ (ಎಐಕೆಕೆಎಸ್‌) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಶಿರಸ್ತೇದಾರ ಸತೀಶ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್‌ ನಜೀರಸಾಬ್‌ ಮೂಲಿಮನಿ, ಕೋವಿಡ್‌-19 ಕಾರಣದಿಂದ ದೇಶದ ಆರ್ಥಿಕತೆ ನೆಲಕಚ್ಚಿದೆ. ಸಣ್ಣ, ಮಧ್ಯಮ ಉದ್ಯಮಗಳು ಅತಂತ್ರ ಸ್ಥಿತಿಯಲ್ಲಿವೆ. ಕೋಟ್ಯಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ದುಡಿಯುವ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ ದುಡಿಯುವ ವರ್ಗಕ್ಕೆ ಮಾರಕವಾದ ಮರಣ ಶಾಸನವಾಗಿರುವ ಈ ಕಾಯ್ದೆಗಳ ಜಾರಿಗೆ ಮುಂದಾಗಿರುವುದು ಸರಿಯಲ್ಲ ಎಂದು ಆರೋಪಿಸಿದರು.

ರಾಜ್ಯಾಧ್ಯಕ್ಷ ಡಿ.ಎಚ್‌. ಪೂಜಾರ, ಬಸವರಾಜ ಬುನ್ನಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next