Advertisement

ಕರ್ತವ್ಯನಿರತ ತಹಶೀಲ್ದಾರ್ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

01:26 PM Jan 31, 2022 | Suhan S |

ಸೊರಬ: ಕರ್ತವ್ಯ ನಿರತ ಹುಮನಾಬಾದ ತಾಲೂಕಿನ ತಹಶೀಲ್ದಾರ್ ಡಾ. ಪ್ರದೀಪ ಕುಮಾರ ಹಿರೇಮಠ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರು ಒತ್ತಡಗಳ ನಡುವೆ ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸುವಂತೆ ಆಗಿದೆ. ಇಂತಹ ಘಟನೆಯಿಂದ ನೌಕರರ ಮನೋಬಲ ಕುಗ್ಗಿ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತದೆ. ನೌಕರರ ಮುಕ್ತವಾಗಿ ಸೇವೆ ಸಲ್ಲಿಸಲು ಉತ್ತಮ ವಾತಾವರಣ ನಿರ್ಮಿಸಬೇಕು ಇಂತಹ ಘಟನೆ ಮರು ಕಳುಹಿಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರ ಅಗತ್ಯ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಗುಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದರು.

ನೌಕರರ ಸಂಘದ ಕಾರ್ಯದರ್ಶಿ ಸಿ.ಪಿ. ಸದಾನಂದ, ರಾಜ್ಯ ಪರಿಷತ್ ಸದಸ್ಯ ಸರ್ವಜ್ಞ ಮೂರ್ತಿ, ಟಿಎಚ್ಒ ಡಾ. ವಿನಯ ಪಾಟೀಲ್, ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಎಸ್. ವಿಜಯಕುಮಾರ್, ಶಿರಸ್ತೆದಾರ್ ನಿರ್ಮಲಾ,  ಸಿ.ಎಚ್. ವಿಶ್ವನಾಥ್, ಆರ್. ನಟೇಶ್, ಪಿ. ಸಂತೋಷ್ ಕುಮಾರ್, ಎಸ್.ಸಿ. ಶಿವಕುಮಾರ್, ಪ್ರಶಾಂತ್ ಕುಮಾರ್, ಬಿ.ಜೆ. ವಿನೋದ್, ಸೇರಿದಂತೆ ವಿವಿಧ ಇಲಾಖೆಯ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next