Advertisement

16ರಂದು ಜೆಡಿಎಸ್‌ನಿಂದ ಪ್ರತಿಭಟನೆ

05:00 PM Aug 11, 2022 | Team Udayavani |

ಜೇವರ್ಗಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಾದಂತ ಬೆಳೆಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಆ.16ರಂದು ಮಂಗಳವಾರ ಜೆಡಿಎಸ್‌ ನಗರ ಘಟಕದ ವತಿಯಿಂದ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್‌. ಎಸ್‌.ಸಲಗರ ಹೇಳಿದರು.

Advertisement

ಪಟ್ಟಣದ ರಿಲಾಯನ್ಸ್‌ ಪೆಟ್ರೋಲ್‌ ಬಂಕ್‌ ಬಳಿ ಇರುವ ಜೆಡಿಎಸ್‌ ನಗರ ಘಟಕದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೇವರ್ಗಿ, ಯಡ್ರಾಮಿ, ಆಂದೋಲಾ, ಇಜೇರಿ, ನೆಲೋಗಿ ಹೋಬಳಿಗಳ ಒಟ್ಟು 1,22,311 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 66,050 ಹೆಕ್ಟೇರ್‌, ಹತ್ತಿ 47,725 ಹೆಕ್ಟೇರ್‌, ಸಜ್ಜೆ, ಕಬ್ಬು-4,721, ಭತ್ತ-1,100, ಸೂರ್ಯಕಾಂತಿ ಮತ್ತು ಮೆಕ್ಕೆ ಜೋಳ 1,000 ಹೆಕ್ಟೇರ್‌, ಹೆಸರು 1,250 ಹೆಕ್ಟೇರ್‌, ಎಳ್ಳು 500 ಹೆಕ್ಟೇರ್‌ ಸೇರಿದಂತೆ ಒಟ್ಟು 1,22,311 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ರೈತರು ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿ ಮಾಡಿ ಬಿತ್ತನೆ ಮಾಡಿದ್ದಾರೆ. ಆದರೆ ಕಳೆದ ಕೆಲ ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬೆಳೆಗಳು ಜಲಾವೃತಗೊಂಡು ಹಳದಿ ಬಣ್ಣಕ್ಕೆ ತಿರುಗಿವೆ. ಕಳೆದ ಎರಡ್ಮೂರು ವರ್ಷಗಳಿಂದ ಒಂದಿಲ್ಲ ಒಂದು ಸಮಸ್ಯೆ ಎದುರಿಸುತ್ತಿರುವ ತಾಲೂಕಿನ ರೈತರು ಪ್ರಸಕ್ತ ವರ್ಷವಾದೂ ಉತ್ತಮ ಬೆಳೆ ಬೆಳೆಯಬಹುದು ಎಂಬ ಆಶಾಭಾವನೆ ಹೊಂದಿದ್ದರು. ಆದರೆ ಅವರ ಆಸೆಗೆ ತಣ್ಣಿರೆರೆಚಿದ್ದು, ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರ ನೀಡುವಾಗ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿದೆ. ಕೂಡಲೇ ತಾಲೂಕಿನಲ್ಲಿ ಬೆಳೆಹಾನಿಯಾದ ರೈತರಿಗೆಲ್ಲರಿಗೂ ಬೆಳೆ ಪರಿಹಾರ ಕೊಡಬೇಕು. ಮಳೆಯಿಂದ ಕಟ್ಟಡ ಕಾರ್ಮಿಕರು ಕೆಲಸವಿಲ್ಲದೇ ತಮ್ಮ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಅವರಿಗೂ ಸರ್ಕಾರ ಸೂಕ್ತ ಪರಿಹಾರ ಹಾಗೂ ದಿನಸಿ ಕಿಟ್‌ ವಿತರಣೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ನಗರ ಘಟಕದ ಕಚೇರಿಯಿಂದ ನೂರಾರು ಜನ ಜೆಡಿಎಸ್‌ ಕಾರ್ಯಕರ್ತರು ಮಿನಿ ವಿಧಾನಸೌಧ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.

ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಂ.ಡಿ. ರೌಫ್‌ ಹವಾಲ್ದಾರ್‌, ಎಂ.ಡಿ.ಇಮ್ರಾನ್‌ ಇನಾಂ ದಾರ, ಮಹಿಬೂಬ ಗುತ್ತೇದಾರ, ಬಬ್ಲು ಇನಾಂ ದಾರ, ಮಾಜೀದ್‌ ಪಟೇಲ ಮಲ್ಲಾಬಾದ, ಖಾಜಾ ಹುಸೇನ್‌, ಬಸವರಾಜ ಸಾಹು, ಮುಜ್ಜು ಖಾನ್‌, ಅಂಬರೀಶ ಮುದ್ದೇಬಿಹಾಳ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next