Advertisement
ಕನ್ನಡ ಜಾಗೃತ ಪರಿಷತ್‌ನ ಅಧ್ಯಕ್ಷ ಕೆ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ಮಾತನಾಡಿ, ಕೋವಿಡ್‌ನಿಂದ ಜನ ಚೇತರಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಬೆಲೆ ಏರಿಕೆಯ ಹೊಡೆತ ಜನಸಾಮಾನ್ಯರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ದಿನಸಿ ಪದಾರ್ಥಗಳು ತೈಲ ಬೆಲೆ, ಶಿಕ್ಷಣ, ಆರೋಗ್ಯ ಮೊದಲಾಗಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಬೆಲೆ ಏರಿಕೆಗಳಿಂದಾಗಿ ಜನ ಸಾಮಾನ್ಯರು ತತ್ತರಿಸುತ್ತಿದ್ದಾರೆ ಎಂದು ಹೇಳಿದರು.
Related Articles
Advertisement
ಗಟ್ಟಿಧ್ವನಿಯಲ್ಲಿ ಕೇಳಬೇಕಿದೆ: ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್ ಮಾತನಾಡಿ, ರಾಮರಾಜ್ಯ, ಅಚ್ಚೇದಿನ್ ಎಂದು ಹೇಳಿ ಜನರನ್ನು ಮೋಸ ಮಾಡುತ್ತಿದ್ರೂ ಜನರಿಗೆ ಇಂದಿನ ವಾಸ್ತವ ಅರಿವಾಗುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲು ನಮ್ಮ ಜನಪ್ರತಿನಿ ಧಿಗಳು ಹಿಂದೆ ಸರಿಯುತ್ತಿದ್ದಾರೆ. ಜನಸಾಮಾನ್ಯರ ಬದುಕು ದಿನೇ ದಿನೆ ದುಸ್ತರವಾಗುತ್ತಿದ್ದರೂ ಆಳುತ್ತಿರುವ ಸರ್ಕಾರಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಜನತೆ ಗಟ್ಟಿ ಧ್ವನಿಯಲ್ಲಿ ಕೇಳಬೇಕಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ಸಂಜೀವ್ ನಾಯಕ್, ಆರ್. ರಂಗನಾಥ್, ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಪರಮೇಶ್, ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್, ಮುಖಂಡರಾದ ನಾಗರಾಜ್, ಸುನೀಲ್ ಬಸವರಾಜ್, ಹಬೀಬ್, ಸೂರಿ, ಮಂಜುನಾಥ್, ದಿವಾಕರ್, ರಾಮಚಂದ್ರ ಮೊದಲಾದವರು ಭಾಗವಹಿಸಿದ್ದರು.