ಬೆಂಗಳೂರು: ದೇಶದಲ್ಲಿ JEE ಮತ್ತು NEET ಪರೀಕ್ಷೆಗಳನ್ನು ಮುಂದೂಡುವ ಪ್ರಶ್ನೆಯೇ ಇಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಂದು ದೇಶದೆಲ್ಲೆಡೆ NSUI ಪ್ರತಿಭಟನೆ ನಡೆಸುತ್ತಿದೆ.
Advertisement
ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕೂಡ ಪ್ರತಿಭಟನೆ ನಡೆಯುತ್ತಿದ್ದು, ಕೋವಿಡ್ ಬಿಕ್ಕಟ್ಟಿನ ನಡುವೆ JEE ಹಾಗೂ NEE ಪರೀಕ್ಷೆ ಬೇಡ. ಇದನ್ನು ಕೂಡಲೇ ಮುಂದೂಡಿಕೆ ಮಾಡುವಂತೆ ಆಗ್ರಹಿಸಲಾಗುತ್ತಿದೆ.
ರಾಜ್ಯ ಎನ್ ಎಸ್ ಯು ಐ ಅಧ್ಯಕ್ಷ ಮಂಜುನಾಥ್ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕೇಂದ್ರ ಸರ್ಕಾರ ಈ ಕೂಡಲೇ ತನ್ನ ಆದೇಶ ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ.