Advertisement

ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

11:49 AM May 18, 2018 | Team Udayavani |

ಬೀದರ: ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿರುವ ಕ್ರಮ ಖಂಡನೀಯ ಎಂದು ಆರೋಪಿಸಿ ನಗರದಲ್ಲಿ ಸಿಪಿಐ, ಸಿಪಿಐಎಂ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಸಿಪಿಐ ಕಾರ್ಯದರ್ಶಿ ಬಾಬುರಾವ್‌ ಹೊನ್ನಾ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಗೋವಾ, ಮಣಿಪುರ ಮತ್ತು ಮೇಘಾಲಯಗಳಲ್ಲಿ ಬಹುಮತ ಇಲ್ಲದಿದ್ದರೂ ಸಹ ಅಲ್ಲಿಯ ರಾಜ್ಯಪಾಲರು ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಆಹ್ವಾನಿಸಿದೆ. ಆದರೆ, ರಾಜ್ಯದಲ್ಲಿ 118 ಶಾಸಕರ ಬಲ ಹೊಂದಿರುವ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಕೂಟವನ್ನು ಸರ್ಕಾರ ರಚಿಸಲು ಆಹ್ವಾನಿಸದೆ 104 ಶಾಸಕ ಬಲ ಇರುವ ಬಿಜೆಪಿಗೆ ಅವಕಾಶ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ತನ್ನ ಅಧಿಕಾರ ಉಪಯೋಗಿಸಿಕೊಂಡು ಸಾಂವಿಧಾನಿಕ ಹುದ್ದೆಗಳನ್ನು ದುರುಪಯೋಗ ಮಾಡಿಕೊಂಡಿದೆ. ಬಹುಮತ ಇಲ್ಲದ ಬಿಜೆಪಿಗೆ ಸಕಾರ ರಚಿಸಲು ಅನುಮತಿಸಿರುವುದು ಪ್ರಜಾಪ್ರಭುತ್ವದ ಕೊಲೆ ಮಾಡಿದಂತಾಗಿದೆ. ಈ ಹಿಂದಿನಂತೆ ಆಪರೇಶನ್‌ ಕಮಲಕ್ಕೆ ದಾರಿ ಮಾಡಿಕೊಡಲಾಗಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next