Advertisement
ಸಂಘಟನೆಯ ಸಂಚಾಲಕ ಕೋಗಳಿ ಮಲ್ಲೇಶ ಮಾತನಾಡಿ, ಸರಕಾರ ಕೂಲಿ ಕಾರ್ಮಿಕರಿಗೆ ಇನ್ನೂ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಕೂಲಿ ಕಾರ್ಮಿಕರಿಗೆ ನೆರವಾಗಬೇಕು. ಕೆಲಸವನ್ನು ನೀಡದೆ ಇದ್ದರೆ ಕೂಲಿ ಕಾರ್ಮಿಕರು ಬೇರೆಡೆ ಗುಳೆ ಹೋಗುವ ಭೀತಿ ಇದೆ. ಗುಳೆಯಿಂದ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಕೂಡಲೇ ಹೆಚ್ಚುವರಿ ಮಾನವದಿನ ಹೆಚ್ಚಿಸಬೇಕು. ಕೂಲಿ ಕಾರ್ಮಿಕರಿಗೆ ವಾರಕ್ಕೊಮ್ಮೆ ಕೂಲಿ ನೀಡಬೇಕು. ಮುಂಗಾರು ಕೈಕೊಟ್ಟಿದ್ದರಿಂದ ರೈತರು ಹೊಲಗಳಲ್ಲಿ ಬಿತ್ತನೆ ಮಾಡದೇ ಮಳೆಗಾಗಿ ಕಾಯುತ್ತಿದ್ದಾರೆ. ಸರಕಾರ ಮೋಡ ಬಿತ್ತನೆಗೆ ಮುಂದಾಗಬೇಕು. ರಾಜ್ಯ ಸರಕಾರ ಸಹಕಾರಿ ಸಂಘಗಳಲ್ಲಿನ ಸಾಲ ಮನ್ನಾ ಮಾಡಿರುವುದು ಸ್ವಾಗಾತಾರ್ಹ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಲು ಮುಂದಾಗಬೇಕು ಎಂದರು.