Advertisement

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಬೃಹತ್ ಸಮಾವೇಶ

12:17 PM Aug 04, 2023 | Team Udayavani |

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪದ ನಿವಾಸಿ ಪಾಂಗಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತಂತೆ ಹಕ್ಕೊತ್ತಾಯ ಮತ್ತು ಪ್ರಕರಣ ಮುಂದಿಟ್ಟು ಧರ್ಮಸ್ಥಳ ಕ್ಷೇತ್ರದ ಮೇಲೆ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೇಲೆ ವೃಥಾರೋಪಗಳಿಂದ ನೊಂದಿರುವ ಆಕ್ರೋಶಿತ ಬಂಧುಗಳು, ನಾಡಿನ ಲಕ್ಷಾಂತರ ಭಕ್ತರು ಸೇರಿ ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ವತಿಯಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಂಭಾಗ ಇದೀಗ ಬೃಹತ್ ಸಮಾವೇಶ ಆರಂಭಗೊಂಡಿದೆ.

Advertisement

ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ ವಿಚಾರ ಪ್ರತಿಭಟನಾ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗದ ಭಕ್ತರು ಆಗಮಿಸಿ ಮಳೆಯ ಮಧ್ಯೆಯೇ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗುತ್ತ ಸೌಜನ್ಯಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟ ಮುಂದುವರೆದಿದೆ‌.

ಪ್ರತಿಭಟನಾ ಸಮಾವೇಶದ ಬಳಿಕ ಉಜಿರೆ ದೇವಸ್ಥಾನದಿಂದ ಉಜಿರೆ ಎಸ್.ಡಿ.ಎಂ. ಕಾಲೇಜಿನವರೆಗೆ ಭಕ್ತರು ಪ್ರತಿಭಟನಾ ಜಾಥಾ ನಡೆಸಲಿರುವರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.

Advertisement

ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜಯನಾಥ್ ಮಾತನಾಡಿ, ಇದು ಧಮನಿತರ ಸಮಾವೇಶ, ದಶಕದಿಂದ ನೋವನ್ನು ಅನುಭವಿಸುತ್ತಿರುವವರ ಕಾರ್ಯಕ್ರಮ. ನಮ್ಮ ಸಹನೆಯ ಕಟ್ಟೆ ಮೀರಿ ಒಡೆದಿದ್ದೇವೆ. ಹಂದಿ ಹೊಡೆಯುವ ಎಂಬ ಹುನ್ನಾರವನ್ನು ಜನ ಪ್ರಶ್ನಿಸುವ ಕಾಲ ಬಂದಿದೆ. ನಮ್ಮ ಹೋರಾಟ ನಿಲ್ಲದು, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಘೋಷಣೆಯೊಂದಿಗೆ ಬೃಹತ್ ಹಕ್ಕೊತ್ತಾಯಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಮಾಜಿ ಸಚಿವ ಅಭಯಚಂದ್ರ ಜೈನ್, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ತಾಲೂಕು ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಮಾಜಿ ಅಧ್ಯಕ್ಷೆ ಶಾರದಾ ರೈ, ತಿಗಳ ಸಮಾಜ ರಾಜ್ಯಾಧ್ಯಕ್ಷ ಜಯರಾಜ್ ಹೊಸಕೋಟೆ, ಸುಂದರ ಗೌಡ ಇಚ್ಚಿಲ, ಎಸ್.ಕೆ.ಡಿ.ಆರ್.ಡಿ.ಪಿ. ಸಿಒಒ ಅನಿಲ್ ಕುಮಾರ್, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next