Advertisement

ನೌಕರರ ಸಂಘದಿಂದ ಪ್ರತಿಭಟನೆ

02:49 PM Dec 06, 2021 | Team Udayavani |

ದೇವದುರ್ಗ: ಬಳ್ಳಾರಿ ಜಿಲ್ಲೆಯ ತೋಳಮಾಮಿಡಿ ಗ್ರಾಮದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಹೋಗಿದ್ದ ಕಂದಾಯ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಪಟ್ಟಣದ ಮಿನಿವಿಧಾನ ಎದುರು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟಿಸಿ ತಹಶೀಲ್ದಾರ್‌ ಶ್ರೀನಿವಾಸ ಚಾಪಲ್‌ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ತೋಳಮಾಮಿಡಿ ಹಾಗೂ ಮಿಲ್ಲರಪೇಟೆ ಸೇರಿ ವಿವಿಧೆಡೆ ಮರಳು ಅಕ್ರಮ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಕಂದಾಯ ಅಧಿಕಾರಿಯಾದ ವೆಂಕಟಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದಾಗ ದಂಧೆಕೋರರು ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ಕಂದಾಯ ಅಧಿಕಾರಿ ಮೇಲೆ ದಂಧೆಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಲ್ಲದೆ 10-15 ಜನರ ಗುಂಪು ಅಧಿಕಾರಿ ಮನೆಗೆ ತೆರಳಿ, ಅವರ ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಅತ್ಯಂತ ಹೇಯ ಕೃತ್ಯವಾಗಿದ್ದು, ಅಧಿಕಾರಿಗಳು ನಿರ್ಭಯವಾಗಿ ಕೆಲಸ ಮಾಡದಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕಂದಾಯ ಅಧಿಕಾರಿ ವೆಂಕಟಸ್ವಾಮಿ ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಹಲ್ಲೆ ನಡೆಸುವ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕು. ಎಲ್ಲ ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಇಂಥ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಹನುಮಂತ್ರಾಯ ಶಾಖೆ, ಶಿವಲಿಂಗಯ್ಯ, ಬಸವರಾಜ, ಭೀಮರಾಯ ಮೇಟಿ, ಮಹಾದೇವ ಪಾಟೀಲ್‌, ಲಕ್ಷ್ಮಣ, ಉಮೇಶ, ಸೋಮಶೇಖರ, ಭೀಮರಾಯ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next