Advertisement

ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಧರಣಿ

04:44 PM Apr 28, 2019 | Naveen |

ಹೊಸಪೇಟೆ: ರಾಯಚೂರು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹತ್ಯೆ ಪ್ರಕರಣದ ತನಿಖೆ ಶೀಘ್ರ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಆಲ್ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ತಹಶೀಲ್ದಾರ್‌ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ತಹಶೀಲ್ದಾರ ಕಚೇರಿ ಆವರಣದಲ್ಲಿ ಜಮಾವಣೆಗೊಂಡು ವಿದ್ಯಾರ್ಥಿನಿ ಅಸಹಜ ಸಾವಿನ ಪ್ರಕರಣ ಬೇಧಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು. ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಹಾಗೂ ಯಾವುದೇ ಪ್ರಭಾವಕ್ಕೊಳಗಾಗದೆ ತ್ವರಿತವಾಗಿ ತನಿಖೆ ನಡೆಸಬೇಕು. ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ನೇಮಿಸಿ ಶೀಘ್ರವಾಗಿ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿನಿಯರಿಗೆ ಮತ್ತು ಮಹಿಳೆಯರಿಗೆ ಭದ್ರತೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮುಖಂಡರಾದ ಈಶ್ವರಿ, ಯರಿಸ್ವಾಮಿ ಹಾಗೂ ಸುರೇಶ್‌ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next