Advertisement

ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರಕಾರವನ್ನು ಆಗ್ರಹಿಸಿ ಪ್ರತಿಭಟನೆ

07:50 AM Jul 27, 2017 | |

ಬೈಂದೂರು: ಇಲ್ಲಿನ ಯುವ ಕಾಂಗ್ರೆಸ್‌ ವತಿಯಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲು ಕೇಂದ್ರ ಸರಕಾರದ ಅಸಹಕಾರ ವಿರೋಧಿಸಿ ಬೈಂದೂರಿನಲ್ಲಿ  ಪ್ರತಿಭಟನೆ ನಡೆಸಲಾಯಿತು.

Advertisement

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬೈಂದೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಶೇಖರ ಪೂಜಾರಿ ಮಹಾದಾಯಿ, ವರಾದ, ಕಳಸ ವಿಷಯದಲ್ಲಿ ರಾಜ್ಯ ರೈತರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಅದೇ ರೀತಿಯಲ್ಲಿ ಭೀಕರ ಬರಗಾಲ ಎದುರಿಸುತ್ತಿರುವ ರಾಜ್ಯ ರೈತರ ಸಾಲವನ್ನು ಕಾಂಗ್ರೆಸ್‌ ನೇತೃತ್ವ ದ ರಾಜ್ಯ ಸರಕಾರ ಮನ್ನಾ ಮಾಡಿದಂತೆ, ಕೇಂದ್ರ ಸರಕಾರವು ಕೂಡಾ ಎಲ್ಲಾ ರೈತರ ರಾಷ್ಟ್ರೀಕೃತ  ಬ್ಯಾಂಕುಗಳ ಸಾಲವನ್ನು  ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಬೈಂದೂರು ವಿಶೇಷ ತಹಶೀಲ್ದಾರ್‌ ಕಚೆೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ತಹಶೀಲ್ದಾರ್‌ ಕಿರಣ ಗೌರಯ್ಯ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಯುವ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಶಾಂತ್‌ ಪೂಜಾರಿ, ಯಡ್ತರೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಗಣೇಶ್‌ ಪೂಜಾರಿ, ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ನಾಗರಾಜ್‌ ಗಾಣಿಗ, ತಾ.ಪಂ. ಸದಸ್ಯ ಜಗದೀಶ್‌ ದೇವಾಡಿಗ, ಖಂಬದಕೋಣೆ ಗ್ರಾಮ ಪಂಚಾಯತ್‌ ಅಧ್ಯಕ್ಷ ರಾಜೇಶ್‌ ದೇವಾಡಿಗ, ಯುವ ಕಾಂಗ್ರೆಸ್‌ ಕಾರ್ಯಕರ್ತರಾದ ಬೆ„ಜೂ ಮುದ್ದೂರು, ಸನತ್‌ ಬಳೆಗಾರ್‌, ಕಿಸಾನ್‌ ರೈತರ ಪ್ರಧಾನ ಕಾರ್ಯದರ್ಶಿ ವೀರಭದ್ರ ಗಾಣಿಗ  ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next