Advertisement

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ

12:47 PM Jul 04, 2017 | |

ಶಿವಮೊಗ್ಗ: ಸಹಕಾರ ಸಂಘಗಳಲ್ಲಿನ ಎಲ್ಲ ಸಾಲ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಸಾಲ
ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ
ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ 50
ಸಾವಿರ ರೂ. ರೈತರ ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹವಾಗಿದೆ. 

Advertisement

ಉಳಿದ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಹಿಂಗಾರು ಮತ್ತು ಮುಂಗಾರು ಬೆಳೆ ನಷ್ಟವಾಗಿದ್ದು, ರೈತರು ಮುಂದಿನ ಬೆಳೆ ಬೆಳೆಯಲು ಅನುಕೂಲವಾಗುವಂತೆ ಈ ಸಾಲಿಗೆ ಹೊಸ ಸಾಲ ಕೊಡುವ ವ್ಯವಸ್ಥೆ ಮಾಡಬೇಕು. ಬೆಳೆಗೆ ನ್ಯಾಯಯುತ ಬೆಲೆ ಸಿಗದೆ ಕಂಗಾಲಾಗಿದ್ದು ವೈಜ್ಞಾನಿಕ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತ ಸಂಘದ
ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್‌, ಯಶವಂತರಾವ್‌ ಘೋರ್ಪಡೆ, ಉಮಾಪತಿಯಪ್ಪ, ಸಂಗಪ್ಪ, ವೀರೇಶ್‌,
ಪುಟ್ಟಪ್ಪ, ಹನುಮಂತಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next