Advertisement
ಗ್ರಾಮದಲ್ಲಿ ಕಳೆದ ಕೆಲ ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಕೆಲ ದಿನಗಳ ಹಿಂದೆ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಅವರು ಗ್ರಾಮಕ್ಕೆ ತೆರಳಿ ಸಮಸ್ಯೆಗೆ ಸ್ಪಂದಿಸಿ ಹೊಸ ಕೊಳವೆಬಾವಿ ಕೊರೆಯಿಸಲು ಗ್ರಾಮೀಣ ನೀರು ಸರಬರಾಜು ನೈರ್ಮಲ್ಯ ಇಲಾಖೆಗೆ ಸೂಚಿಸಿದ್ದರು. ತಾತ್ಕಾಲಿಕವಾಗಿ ನೀರಿನ ಸಮಸ್ಯೆ ಬಗೆಹರಿದಿತ್ತು. ಆದರೆ ಕೊಳವೆಬಾವಿಯಲ್ಲಿ ಸೆಲೆ ಬತ್ತಿದ್ದಕ್ಕೆ ಸಮಸ್ಯೆ ಮರುಕಳಿಸಿತು. ಇತ್ತೀಚೆಗೆ ಗ್ರಾಮದ ದಕ್ಷಿಣ ಭಾಗದಲ್ಲಿನ ನಾಲೆ ಬಳಿ ಕೊಳವೆಬಾವಿ ಕೊರೆಯಿಸಲಾಗಿದೆ. ಅದಕ್ಕೆ ಮೋಟರ್ ಅಳವಡಿಸಿ, ಪೈಪ್‌ಲೈನ್ ಮೂಲಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ತಳ್ಳುಗಾಡಿಯಲ್ಲಿ ನೀರು ತರಲು ಹೋಗಿದ್ದ ಬಾಲಕನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. 4 ಲಕ್ಷ ರೂ. ಖರ್ಚು ಮಾಡಿದರೂ ಬಾಲಕ ಇನ್ನೂ ಗುಣಮುಖನಾಗಿಲ್ಲ. ನೀರಿನ ಸಮಸ್ಯೆಯಿಂದಾಗಿ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಗ್ರಾಪಂ ಹಾಗೂ ತಾಲೂಕು ಆಡಳಿತ ಸ್ಪಂದಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.
Advertisement
ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ
01:03 PM May 01, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.