Advertisement

ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ 

03:19 PM Oct 14, 2017 | Team Udayavani |

ಬಂಟ್ವಾಳ: ಜಿಲ್ಲೆಯಲ್ಲಿ ಉಂಟಾಗಿರುವ ಮರಳು ಸಮಸ್ಯೆಗೆ ರಾಜ್ಯ ಸರಕಾರ ಮತ್ತು ಸ್ಥಳೀಯ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವಾಗಿದ್ದು, ಈ ಬಗ್ಗೆ ಉಸ್ತುವಾರಿ ಸಚಿವರೂ ಮೌನವಾಗಿರುವುದು ಖಂಡನೀಯ ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಆರೋಪಿಸಿದ್ದಾರೆ.

Advertisement

ಮರಳು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಅ.13ರಂದು ಬಿ.ಸಿ.ರೋಡ್‌ನ‌ಲ್ಲಿ ಪಕ್ಷದ ವತಿಯಿಂದ ನಡೆದ ಪ್ರತಿಭಟನ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಹೊರಜಿಲ್ಲೆಗೆ ಅಕ್ರಮ ಸಾಗಾಟ
ಜಿಲ್ಲೆಯ ಜನರು ಮರಳಿನ ತೀವ್ರ ಅಭಾವ ಎದುರಿಸುತ್ತಿದ್ದಾರೆ. ಅಭಿವೃದ್ಧಿ ಚಟುವಟಿಕೆ ಮೇಲೆ ದುಷ್ಪರಿಣಾಮ ಉಂಟಾಗಿದೆ. ಸರಕಾರದ ತಪ್ಪು ನೀತಿಯಿಂದಾಗಿ ಮರಳು ಕೊರತೆ ಹೆಚ್ಚಿದೆ. ಹೊರಜಿಲ್ಲೆ, ಹೊರ ರಾಜ್ಯಗಳಿಗೆ ಮರಳು ಅಕ್ರಮವಾಗಿ ಸಾಗಾಟವಾಗುತ್ತಿದೆ ಎಂದು ಆರೋಪಿಸಿದರು.

ಸಾಮಾನ್ಯ ಜನರಿಗೆ ಮನೆ, ಕಟ್ಟಡ ನಿರ್ಮಿಸಲು ಆಗುತ್ತಿಲ್ಲ. ಕಟ್ಟಡ ನಿರ್ಮಾಣದ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪರಿಸ್ಥಿತಿ ಇಷ್ಟು ಗಂಭೀರ ಸ್ವರೂಪ ತಾಳಿದ್ದರೂ ಸರಕಾರ ಮೌನ ವಹಿಸಿದೆ ಎಂದು ಟೀಕಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ನಾಯಕರನ್ನು, ಕಾರ್ಯಕರ್ತರನ್ನು ದಮನಿಸುವುದು ಹೇಗೆಂಬ ಚಿಂತನೆಯಲ್ಲಿದ್ದಾರೆ. ಅಭಿವೃದ್ಧಿ ಕಾರ್ಯ ಗಮನಿಸುವಷ್ಟು ಸಮಯವಿಲ್ಲವೇ ಎಂದು ಪ್ರಶ್ನಿಸಿದರು.

Advertisement

ಪ್ರತಿಭಟನೆ ಉದ್ದೇಶಿಸಿ ಬಿಜೆಪಿ ಮುಖಂಡ ರಾಜೇಶ್‌ ನಾೖಕ್‌ ಉಳಿಪಾಡಿಗುತ್ತು, ಜಿಲ್ಲಾ ಉಪಾಧ್ಯಕ್ಷ ಜಿ. ಆನಂದ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್‌ ಮಾತನಾಡಿದರು.

ಜಿಲ್ಲಾ ಕಾರ್ಯದರ್ಶಿ ಸುಗುಣಾ ಕಿಣಿ, ಜಿ.ಪಂ. ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ಎಂ. ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ತಾ.ಪಂ. ಸದಸ್ಯರಾದ ಕುಲ್ಯಾರು ನಾರಾಯಣ ಶೆಟ್ಟಿ, ಗೀತಾ ಚಂದ್ರಶೇಖರ್‌, ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್‌ ರೈ, ಸೀಮಾ ಮಾಧವ, ದಿನೇಶ್‌ ಭಂಡಾರಿ, ಧರ್ಣಮ್ಮ, ವಿಜಯ ರೈ, ಹರಿಶ್ಚಂದ್ರ ಪೂಜಾರಿ, ಚೆನ್ನಪ್ಪ ಕೋಟ್ಯಾನ್‌  ದಿನೇಶ್‌ ಅಮ್ಟೂರು,  ಮಹಾಬಲ ಶೆಟ್ಟಿ, ಭಾಸ್ಕರ್‌ ಟೈಲರ್‌, ಜನಾರ್ದನ ಕುಲಾಲ್‌, ಸಂತೋಷ್‌ ರಾಯಿ, ಹರೀಶ್‌ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಗಂಗಾಧರ ಕೋಟ್ಯಾನ್‌, ವಸಂತ ಅಣ್ಣಳಿಕೆ, ಗೋಪಾಲ ಸುವರ್ಣ, ಗೋಪಾಲಕೃಷ್ಣ ಚೌಟ, ರಾಜಾರಾಮ ನಾಯಕ್‌, ಆನಂದ ಶಂಭೂರು, ಯಶೋಧರ ಕರ್ಬೆಟ್ಟು, ರವೀಶ್‌ ಶೆಟ್ಟಿ, ದಯಾನಂದ ಸಪಲ್ಯ ಮತ್ತಿತರರು ಉಪಸ್ಥಿತರಿದ್ದರು.

ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್‌ ಬಂಟ್ವಾಳ ಸ್ವಾಗತಿಸಿ ಪ್ರಸ್ತಾವನೆ ನೀಡಿ ಕಾರ್ಯಕ್ರಮ ನಿರ್ವಹಿಸಿದರು. ಮೋನಪ್ಪ ದೇವಸ್ಯ ವಂದಿಸಿದರು. ಬಂಟ್ವಾಳ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮರಳು ನೀತಿ ಜಾರಿಗೊಳಿಸಿ
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ವೈಜ್ಞಾನಿಕ ಮರಳು ನೀತಿ ತಕ್ಷಣ ಜಾರಿಗೊಳಿಸಬೇಕು, ಜಿಲ್ಲೆಯಿಂದ ಹೊರಭಾಗಕ್ಕೆ ಮರಳು ಸಾಗಾಟವನ್ನು ಸಂಪೂರ್ಣ ನಿಷೇಧಿಸಬೇಕು. ಜಿಲ್ಲೆಯ ಜನರಿಗೆ ನಿರಂತರವಾಗಿನ್ಯಾಯಯುತ ಬೆಲೆಯಲ್ಲಿ ಮರಳು ದೊರಕುವಂತಾಗಬೇಕು.
ಬಿ.ದೇವದಾಸ ಶೆಟ್ಟಿ,
  ಕ್ಷೇತ್ರ ಬಿಜೆಪಿ ಅಧ್ಯಕ್ಷ 

Advertisement

Udayavani is now on Telegram. Click here to join our channel and stay updated with the latest news.

Next