Advertisement

ಕೃಷಿ ವಿಶ್ವವಿದ್ಯಾಲಯ ಕಾಯ್ದೆ ತಿದ್ದುಪಡಿ ಆಗ್ರಹಿಸಿ ಪ್ರತಿಭಟನೆ

06:55 AM Jun 18, 2018 | Team Udayavani |

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಆಸ್ತಿತ್ವದಲ್ಲಿರು ಖಾಸಗಿ ಕೃಷಿ ಕಾಲೇಜುಗಳನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ಕಳೆದ 6 ದಿನಗಳಿಂದ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದು, ಜೂ.19ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನಾ ರ್ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

Advertisement

ಈ ಕುರಿತು ಕೃಷಿ ವಿಶ್ವವಿದ್ಯಾನಿಲಯ ಸಂಘದ ರಾಜ್ಯ ಸಂಚಾಲಕ ವಿ ರಮೇಶ್‌ ಮಾತನಾಡಿ, ಈ ಹಿಂದೆ 2009ರಲ್ಲಿ ಬಿಜೆಪಿ ಸರ್ಕಾರ ಅಧಿಕಾರವಧಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 8 ಕ್ಕೂ ಹೆಚ್ಚು ಖಾಸಗಿ ಕೃಷಿ ಕಾಲೇಜುಗಳ ಆರಂಭವಾದವು. ಆದರೆ ಇವುಗಳು ಎಸಿಎಆರ್‌ ಹಾಗೂ 1963ರ ಕೃಷಿ ಕಾಯ್ದೆ ನಿಯಮಗಳನ್ನು ಗಾಳಿಗೆ ತೂರಿ ಕೇವಲ ಲಾಭದ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಸೂಕ್ತ ಪ್ರಯೋಗಾಲಯ, ನುರಿತ ಶಿಕ್ಷಕರಿಲ್ಲ, ವಿದಾರ್ಥಿಗಳಿಗೆ ಅನುಗುಣವಾಗಿ ಕೃಷಿಭೂಮಿ ಇಲ್ಲ. ಕೇವಲ ಒಂದು ಕಟ್ಟಡವನ್ನು ಕಟ್ಟಿಸಿ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳಿಲ್ಲದೇ ಕಾಲೇಜು ನಡೆದುತ್ತಿದ್ದಾರೆ. ಹಾಗಾಗಿ ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎಲ್ಲಾ ಖಾಸಗಿ ಕೃಷಿ ವಿವಿಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಪ್ರಸ್ತುತ ರಾಜ್ಯದ 6 ಕೃಷಿ ವಿವಿಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾಗ ಅರ್ಹ 2000 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಿದ್ದರೇ ಖಾಸಗಿ ಕಾಲೇಜುಗಳು ಈ ನಿಯಮಗಳನ್ನು ಗಾಳಿಗೆ ತೂರಿ ವಿದ್ಯಾರ್ಥಿ ಬೇಕಾಬಿಟ್ಟಿಯಾಗಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಅವರ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ರೈ ಟೆಕ್‌ ಎಂಬ ಖಾಸಗಿ ಕೃಷಿ ಕಾಲೇಜು ಕೃಷಿ ಖಾಯ್ದೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ವರ್ಷಕ್ಕೆ ಸಾವಿರಕ್ಕೂ ಹೆಚ್ಚು ವಿದಾರ್ಥಿಗಳನ್ನು ಕೋರ್ಸಗೆ ಸೇರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಖಾಯ್ದೆ ತಿದ್ದುಪಡಿ ಈ ಕುರಿತು 2009ರಲ್ಲಿ ಹೋರಾಟ ಮಾಡಿದಾಗ ಎಚ್‌.ಡಿ. ಕುಮಾರಸ್ವಾಮಿ ಅವರು ನಮ್ಮನ್ನು ಬೆಂಬಲಿಸಿದ್ದರು. ಈಗ ಅವರೇ ಮುಖ್ಯಮಂತ್ರಿಗಳಾಗಿದ್ದು ಖಾಯ್ದೆ ತಿದ್ದುಪಡಿಗೆ ಮುಂದಾಗಬೇಕು. ಇನ್ನು ಜೂ.19ರಂದು ಬೆಳಗ್ಗೆ 10ಗಂಟೆಗೆ ಟೌನ್‌ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ರಾಜ್ಯಮಟ್ಟದ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಈ ರ್ಯಾಲಿಯಲ್ಲಿ ರಾಜ್ಯದ ಎಲ್ಲಾ ಕೃಷಿ ವಿವಿಗಳ ವಿದ್ಯಾರ್ಥಿಗಳು ಹಾಗೂ ಕೃಷಿ ಚಿಂತಕರು, ತಜ್ಞರು  ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next