Advertisement

ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

05:03 AM Jun 06, 2020 | Lakshmi GovindaRaj |

ಮೈಸೂರು: ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಮಹಿಳಾ ಸಂಘಟನೆಗಳಿಂದ  ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಬಳಿ ಕುರುಬೂರು  ಶಾಂತಕುಮಾರ್‌ ಮಾತನಾಡಿದರು.

Advertisement

ಕೋವಿಡ್‌ 19 ಲಾಕ್‌ಡೌನ್‌ನಿಂದ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದೆ ಕೃಷಿ ಉತ್ಪನ್ನಗಳನ್ನು ಬೀದಿಬದಿಗಳಲ್ಲಿ ಸುರಿದು ನಷ್ಟ ಅನುಭವಿಸುವಂತಾಗಿದೆ. ಕೇಂದ್ರ ಸರ್ಕಾರ ಹಳೆ ಸಾಲ ಮನ್ನಾ ಮಾಡಿ  ಕೂಡಲೇ ಎಲ್ಲ ರೈತರಿಗೆ ಹೊಸ ಸಾಲ ಕೊಡಿಸಲು ಬ್ಯಾಂಕುಗಳಿಗೆ ಸೂಚಿಸಬೇಕು ಎಂದರು.

ಕೇಂದ್ರ ಸರ್ಕಾರ ವಿದ್ಯುತ್‌ ಕಾಯ್ದೆಯನ್ನು ತಿದ್ದುಪಡಿ ಮಾಡಿ ಖಾಸಗಿ ಉದ್ದಿಮೆದಾರರಿಗೆ ಅನುಕೂಲ ಮಾಡಲು ಹೊರಟಿದೆ. ಇದ ರಿಂದ ರೈತರಿಗೆ  ಸಮರ್ಪಕ ವಿದ್ಯುತ್‌ ದೊರೆ ಯುವುದಿಲ್ಲ. ಅದಕ್ಕಾಗಿ ವಿದ್ಯುತ್‌ ತಿದ್ದುಪಡಿ ಕಾಯ್ದೆ ತರಬಾರದು ಎಂದು ಒತ್ತಾಯಿಸಿ ದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರ ದಂತೆ ವರದಿ ನೀಡಬೇಕು.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಮ್ಮ ಕಚೇರಿಯ ಮುಂದೆ ನಿರಂತರ ಹೋರಾಟ ನಡೆಸಲಾಗು ತ್ತದೆ ಎಂದು ಎಚ್ಚರಿಸಿದರು. ಬಳಿಕ ಅಪರ ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹತ್ತಹಳ್ಳಿ ದೇವರಾಜು, ಹೊಸೂರು  ಕುಮಾರ್‌ ಸೇರಿದಂತೆ ರೈತರು, ಮಹಿಳೆಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next