Advertisement

ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

10:33 AM Jul 07, 2019 | Team Udayavani |

ಹಿರೇಕೆರೂರ: ಬಡ ಮತ್ತು ಪ್ರತಿಭಾ ವಂತ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವಂತೆ ಆಗ್ರಹಿಸಿ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪಟ್ಟಣದ ಸರ್ವಜ್ಞ ವೃತ್ತದಿಂದ ತಹಶೀಲ್ದಾರ್‌ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

Advertisement

ಈ ವೇಳೆ ಮಾತನಾಡಿದ ತಾಲೂಕು ಎಬಿವಿಪಿ ಸಂಚಾಲಕ ಹಾಲೇಶರಾವ್‌ ಹಲಗೇರಿ ಮಾತನಾಡಿ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುತ್ತೇವೆ. ಶಿಕ್ಷಣಕ್ಕಾಗಿ ಸಾಕಷ್ಟು ಸಾಲ ನೀಡುತ್ತೇವೆ ಎಂದು ಆಶ್ವಾಸನೆ ನೀಡಿ ಚುನಾವಣೆಯಲ್ಲಿ ಗೆದ್ದ ನಂತರ ವಿದ್ಯಾರ್ಥಿಗಳ ಪರ ಯಾವುದೇ ಕೆಲಸ ಕಾರ್ಯ ಮಾಡದೇ ನಿರ್ಲಕ್ಷ ್ಯ ತೋರುತ್ತಿದ್ದಾರೆ ಎಂದು ದೂರಿದರು. ರಾಜ್ಯವು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ರೈತಾಪಿ ಕುಟುಂಬಗಳು ಸಂಕಷ್ಟದಲ್ಲಿದ್ದು, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ದಿನಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದಿಂದ ಶಿಕ್ಷಣ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತ್ತಾರೆ. ತಾಲೂಕಿನಲ್ಲಿ ಬಡ ಮತ್ತು ಪ್ರತಿಭಾವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್‌ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಮಂಜುನಾಥ ಕೊಳ್ಳೇರ, ರಾಜು ಅರಳೀಕಟ್ಟಿ, ಕಾರ್ತಿಕ ಮಡಿವಾಳರ, ಅಭಿಷೇಕ ಕಾಯಕದ, ಪ್ರಶಾಂತ ಎಸ್‌., ಅವಿನಾಶ ಪೂಜಾರ, ಚಂದ್ರು ಹೊಸಳ್ಳಿ, ಶಿವು, ವೀರೇಶ ಪೂಜಾರ, ಮಾಲತೇಶ ಬತ್ತೂರಿ ಹಾಗೂ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next