ಎಫ್ ಮಾರ್ಗಸೂಚಿಯಂತೆ ಇಂದಿಗೂ ಸಮರ್ಪಕವಾದ ಪರಿಹಾರ ಬಂದಿಲ್ಲ. ಆದ್ದರಿಂದ ಕೂಡಲೇ ರಾಜ್ಯದಲ್ಲಿನ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಶೀಘ್ರ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಕಣ್ಣು ತೆರೆಸುವ ಕಾರ್ಯ ಮಾಡಲಾಗುವುದು ಎಂದು ವೆಲೆಧೀರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಹೇಳಿದರು.
Advertisement
ನಗರದ ಎನ್‌ವಿಎಂ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದಕ್ಕೆ ಖಂಡಿಸಿದರು. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. 2014ಕ್ಕೆ ಹೋಲಿಸಿದರೆ ಕಚ್ಚಾ ತೈಲದ ಬೆಲೆ ಕಡಿಮೆಯಾದರೂ ಹೆಚ್ಚಿನ ಸುಂಕದಿಂದಾಗಿ ಜನರು ದುಬಾರಿ ಬೆಲೆ ತೆರುವಂತಾಗಿದೆ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ದೂರಿದರು.
ಕೃಷಿ ಕಾಯ್ದೆ ಅನುಷ್ಠಾನಕ್ಕೆ ತರಲಿ. ಆ ಕಾಯ್ದೆಗಳಿಂದ ಯಾವುದೇ ತೊಂದರೆ ಇಲ್ಲ ಎಂಬುವುದು ರೈತರಿಗೆ ಖಚಿತವಾದ ಮೇಲೆ ದೇಶದಾದ್ಯಂತ ಜಾರಿಗೊಳಿಸಲಿ.
ಈ ಕರಾಳ ಕಾಯ್ದೆಗಳ ವಿರುದ್ಧ ಹಳ್ಳಿಹಳ್ಳಿಗೂ ಭೇಟಿ ನೀಡಿ ಜಾಗೃತಿ ಮೂಡಿಸಲು ಚಳವಳಿ ನಡೆಸುತ್ತೇವೆ ಎಂದರು. ಮೌಲಿಕ ರಾಜಕಾರಣಕ್ಕೆ ಮಾದರಿಯಾಗಿ ಸೇವೆಯ ಮೂಲಕ ಡಬುಪಿಐ ಕೆಲಸ ಮಾಡುತ್ತಿದೆ. ಹಲವಾರು ನಗರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯಿತಿಯಲ್ಲಿ ಸದಸ್ಯರಿದ್ದಾರೆ. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ನಮ್ಮ ಪಕ್ಷ ಸ್ಪರ್ಧೆ ಮಾಡುವುದು ಎಂದು ತಿಳಿಸಿದರು. ಜಾರಕಿಹೊಳಿ ಪ್ರಕರಣ ಅನೈತಿಕ ರಾಜಕಾರಣಕ್ಕೆ ನೇರ ಸಾಕ್ಷಿಯಾಗಿದೆ. ಇಂತಹದನ್ನು ತಡೆಗಟ್ಟಲು ನೈತಿಕ, ಮೌಲ್ಯಾಧಾರಿತ ರಾಜಕಾರಣದ ಅವಶ್ಯಕತೆ ಇದೆ. ಜನತೆ ನೈತಿಕ ರಾಜಕಾರಣ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ರಾಜ್ಯ ಮಾಧ್ಯಮ ಕಾರ್ಯದರ್ಶಿ ಜಾಗೀರ್ದಾರ್, ಜಿಲ್ಲಾಧ್ಯಕ್ಷ ವಾಸೆ ಇನ್ನಿತರರು ಇದ್ದರು.