Advertisement

18ಕ್ಕೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

12:30 PM Oct 16, 2021 | Team Udayavani |

ಮಸ್ಕಿ: ನ್ಯಾ| ಸದಾಶಿವ ಆಯೋಗದ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಅ.18ರಂದು ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟ ಸಮಿತಿ ಮುಖಂಡರಾದ ದೊಡ್ಡಪ್ಪ ಮುರಾರಿ, ಸಿ. ದಾನಪ್ಪ ಹೇಳಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದರು. 30 ವರ್ಷಗಳಿಂದ ನ್ಯಾ| ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಹೋರಾಟ ಮಾಡಲಾಗುತ್ತಿದೆ. ಆದರೆ, ರಾಜಕೀಯ ಪಕ್ಷಗಳು ಚುನಾವಣೆ ಬಂದಾಗ ಮಾತ್ರ ಮೀಸಲಾತಿ ಅಸ್ತ್ರ ಹೊರ ಬಿಟ್ಟು ನಂತರ ಮೌನಕ್ಕೆ ಶರಣಾಗಿ ನಮಗೆ ಮೋಸ ಮಾಡುತ್ತಿವೆ.

ಕೆಲವರು ನ್ಯಾ| ಸದಾಶಿವ ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಪ್ರಚಾರ ಮಾಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸದಾಶಿವ ಆಯೋಗದ ವರದಿ ವೈಜ್ಞಾನಿಕ ಹಾಗೂ ಸಂವಿಧಾನ ಪರವಾಗಿದೆ. ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕಿದೆ. ಇತ್ತೀಚೆಗೆ ಸದಾಶಿವ ಆಯೋಗದ ವರದಿ ಜಾರಿಗೆ ಬಿಡುವುದಿಲ್ಲ ಎಂದು ಹೇಳುವ ಮೂಲಕ ಸಚಿವ ಪ್ರಭು ಚವ್ಹಾಣ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಕೂಡಲೇ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಜಿಪಂ ಮಾಜಿ ಸದಸ್ಯ ದುರಗಪ್ಪ ಗುಡಲದಿನ್ನಿ, ಹನುಮಂತಪ್ಪ ಮುದ್ದಾಪೂರು, ದೊಡ್ಡ ಕರಿಯಪ್ಪ, ಬಿ. ತಿಕ್ಕಯ್ಯ, ಮೌನೇಸ ಮುರಾರಿ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪೂರ, ಸುರೇಶ ಅಂತರಗಂಗಿ, ಬಸವರಾಜ ಉದ್ಬಾಳ ಹನುಮಂತಪ್ಪ ಮೋಚಿ, ಹನುಮಂತಪ್ಪ ಪರಾಪೂರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next