Advertisement
ನಗರದ ಆನಂದರಾವ್ ವೃತ್ತದ ಬಳಿಯ ಗಾಂಧಿ ಪ್ರತಿಮೆ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ಮತ್ತು ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ವಿನಯ ಕುಲಕರ್ಣಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಬ್ಬರನ್ನೂ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
Related Articles
Advertisement
ಸಂಸದ ಪಿ.ಸಿ.ಮೋಹನ್, ಶಾಸಕರಾದ ಎಸ್. ಸುರೇಶ್‌ಕುಮಾರ್, ಮುನಿರಾಜು, ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ, ಬಿಜೆಪಿ ನಗರ ಅಧ್ಯಕ್ಷ ನಗರ ಅಧ್ಯಕ್ಷಪಿ.ಎನ್.ಸದಾಶಿವ ಮತ್ತಿತರರು ಇದ್ದರು.
ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣದ ಪರಿವರ್ತನಾ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನಡುಕ ಆರಂಭವಾಗಿದ್ದು, ಈ ಕಾರಣದಿಂದ ಯಾತ್ರೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.– ಜಗದೀಶ ಶೆಟ್ಟರ್
ವಿಧಾನಸಭೆ ಪ್ರತಿಪಕ್ಷ ನಾಯಕ ಕೇಂದ್ರ ಸರ್ಕಾರದ ಹಣದಲ್ಲಿ ಕೈಗೊಳ್ಳುತ್ತಿರುವ ಎಲ್‌ಇಡಿ ಬಲ್ಬ್ ವಿತರಿಸುವ ಯೋಜನೆ, ಅನ್ನಭಾಗ್ಯ ಯೋಜನೆಗಳನ್ನು ತಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಊರೆಲ್ಲಾ ಬುರುಡೆ ಬಿಡುತ್ತಾ ತಿರುಗಾಡುತ್ತಿದ್ದಾರೆ. ದೇಶದಲ್ಲೇ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ವಿರುದ್ದ ಎಸಿಬಿಯಲ್ಲಿ 48 ದೂರುಗಳು ದಾಖಲಾಗಿದ್ದರೂ ನಾನೊಬ್ಬನೇ ಸಾಚಾ ಎನ್ನುವಂತೆ ವರ್ತಿಸುತ್ತಿದ್ದಾರೆ.
– ಆರ್.ಅಶೋಕ್
ಮಾಜಿ ಉಪಮುಖ್ಯಮಂತ್ರಿ