Advertisement
ಸಿಆರ್‌ಝಡ್ ಮತ್ತು ನಾನ್ ಸಿಆರ್‌ಝಡ್ ಎರಡು ವಲಯಗಳಲ್ಲಿ ಮರಳುಗಾರಿಕೆ ಮತ್ತು ಸಾಗಾಣಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು ಕಟ್ಟಡ ಕಾಮಗಾರಿಗಳು ನಿಂತು ಹೋಗಿವೆ. ಈ ಬಗ್ಗೆ ಮುಖ್ಯಮಂತ್ರಿ, ಉಸ್ತುವಾರಿ ಸಚಿವರು, ಗಣಿ ಇಲಾಖೆಯ ಅಧಿ ಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಭಟನೆಯಲ್ಲಿ ಸಿವಿಲ್ ಎಂಜಿನಿಯರ್ ಅಸೋಸಿಯೇಶನ್, ಕೆನರಾ ಬಿಲ್ಡರ್ ಅಸೋಸಿಯೇಶನ್, ಕ್ರೆಡಾೖ ಮಂಗಳೂರು, ಕರಾವಳಿ ಸಿಮೆಂಟ್ ಡೀಲರ್ ಅಸೋಸಿಯೇಶನ್, ಸ್ಟೀಲ್ ಡೀಲರ್ಸ್ ಅಸೋಸಿಯೇಶನ್, ಪೈಂಟ್ ಹಾರ್ಡ್‌ವೇರ್ ಡೀಲರ್ ಅಸೋಸಿ ಯೇಶನ್‌ನವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈಗ ರಾತ್ರಿ ವೇಳೆ ಮಾತ್ರ ಕದ್ದುಮುಚ್ಚಿ ಮರಳು ಪೂರೈಕೆ ಮಾಡಲಾಗುತ್ತಿದೆ. ಅದು ದುಬಾರಿಯಾಗಿದೆ. ಪೂರೈಸುವ ಮರಳಿನ ಪ್ರಮಾಣದಲ್ಲಿಯೂ ಮೋಸ ಮಾಡಲಾಗುತ್ತಿದೆ. ಗುಣಮಟ್ಟವೂ ಉತ್ತಮವಾಗಿಲ್ಲ. ಇಂತಹ ಮರಳನ್ನು ಬಳಸಿ ನಿರ್ಮಾಣ ಕಾಮಗಾರಿ ನಡೆ ಸುವುದು ಕಷ್ಟಸಾಧ್ಯವಾಗಿರುವುದರಿಂದ ಶೇ. 50ರಷ್ಟು ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ನಿರ್ಮಾಣ ಕ್ಷೇತ್ರದ ಮೇಲೆ ಮಾತ್ರ ವಲ್ಲದೆ ಅದನ್ನು ಅವಲಂಬಿಸಿರುವ ಕಾರ್ಮಿಕ ವರ್ಗ, ಇಡೀ ವ್ಯವಹಾರ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂದವರು ಹೇಳಿದರು.
Related Articles
Advertisement