Advertisement

ಸೇವಾ ಭದ್ರತೆ ಒದಗಿಸಲು ಆಗ್ರಹಿಸಿ ಪ್ರತಿಭಟನೆ

04:15 PM Mar 30, 2022 | Team Udayavani |

ದಾವಣಗೆರೆ: ರಾಜ್ಯ ಸರ್ಕಾರ ಕೊರೊನಾ ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿದ್ದ ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್‌ಗಳನ್ನು ಮುಂದುವರೆಸಿ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಕರ್ನಾಟಕ ಕೊರೊನಾ ಆರೋಗ್ಯ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಕೊರೊನಾ ಸಂಕಷ್ಟದ ಸಮಯದಲ್ಲಿ ರೋಗಿಗಳಿಗೆಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯಲ್ಲಿ 180 ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,800 ಸಿಬ್ಬಂದಿಗಳನ್ನು ಆರು ತಿಂಗಳ ಅವಧಿಗೆ ಸರ್ಕಾರ ನೇಮಕಾತಿ ಮಾಡಿಕೊಂಡಿತ್ತು. ನಂತರದಲ್ಲಿ ಅವಧಿ ವಿಸ್ತರಣೆ ಮಾಡಿ ನಮ್ಮಿಂದ ಸೇವೆ ಪಡೆಯಲಾಯಿತು. ಆದರೆ ಈಗ ಇದ್ದಕ್ಕಿದ್ದಂತೆ ಮಾ. 31ರ ನಂತರ ನಮ್ಮನ್ನು ಕೆಲಸದಿಂದ ತೆಗೆದುಹಾಕಲಾಗುತ್ತಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪ್ರಮೋದ್‌ ಬೇಸರ ವ್ಯಕ್ತಪಡಿಸಿದರು.

ಕೊರೊನಾದ ನಾಲ್ಕನೇ ಅಲೆ ಬರುವ ಸಂಭವವಿದೆ. ಆಗ ರೋಗಿಗಳಿಗೆ ತೊಂದರೆ ಆಗುವ ಸಂಭವವೂ ಇರುವುದರಿಂದ ನಮ್ಮನ್ನೇ ಮುಂದುವರೆಸಿ ಸೇವಾ ಭದ್ರತೆ ನೀಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next