Advertisement

ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

12:26 PM Feb 14, 2020 | Suhan S |

ದೊಡ್ಡಬಳ್ಳಾಪುರ : ಡಾ.ಸರೋಜಿನಿ ಮಹಿಷಿ ವರದಿಯ ಜಾರಿಗೆ ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ಹೋರಾಟವನ್ನು ಬೆಂಬಲಿಸಿ ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನದ ವತಿಯಿಂದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಈ ವೇಳೆ ಮಾತನಾಡಿದ ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನದ ರಾಜ್ಯಾಧ್ಯಕ್ಷ ಮುನಿಆಂಜನಪ್ಪ,ಕಳೆದ 36 ವರ್ಷಗಳ ಹಿಂದೆ ಡಾ.ಸರೋಜಿನ ಮಹಿಷಿಯವರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ 58 ಅಂಶಗಳ ವರದಿಯಲ್ಲಿ ರಾಜ್ಯದಲ್ಲಿರುವ ಕನ್ನಡಿಗರಿಗೆ ಉದ್ಯೋಗ ಮತ್ತು ಇತರೆ ಕ್ಷೇತ್ರಗಳಲ್ಲಿರುವ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸುವ ಉದ್ದೇಶಹೊಂದಿದೆ.

ಆದರೆ, ವರದಿ ಜಾರಿಗೊಳಿಸಬೇಕಾದ ರಾಜ್ಯ ಸರ್ಕಾರಗಳು ಇದನ್ನು ಕಡೆಗಣಿಸಿದ್ದು ಸ್ಥಳೀಯರಿಗೆ ಉದ್ಯೋಗ ದೊರಕದಾಗಿದೆ.ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷದ ರಾಜ್ಯ ಸರ್ಕಾರ ರಾಜಕೀಯ ಮರೆತು ಡಾ.ಸರೋಜಿನಿ ಮಹಿಷಿ ವರದಿಯ ಸಮರ್ಪಕ ಅನುಷ್ಠಾನ ಮುಂದಾಗಿ ರಾಜ್ಯದ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂವಿಧಾನಿಕ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗಲಿದೆ ಎಂದರು.

ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಹನುಮಣ್ಣ ಗೂಳ್ಯ ಮಾತನಾಡಿ,ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಮರ್ಪಕ ಅನುಷ್ಠಾನಕ್ಕಾಗಿ ಕನ್ನಡ ಸಂಘಟನೆಗಳ ಒಕ್ಕೂಟದಿಂದ ಕಲೆದ ಮೂರು ತಿಂಗಳಿನಿಂದ ರಾಜಧಾನಿ ಬೆಂಗಳೂರಿನಲ್ಲಿ ಅನಿರ್ದಿಷ್ಟ ಅವಧಿಗೆ ಧರಣಿ ನಡೆಸಲಾಗುತ್ತಿದೆ,ಈಗಾಗಲೇ ಈ ಧರಣಿ 100ದಿನಗಳನ್ನು ಪೂರೈಸಿದೆ.ಸರ್ಕಾರ ನೈಜ ಸಮಸ್ಯೆಯತ್ತ ಗಮನ ಹರಿಸದೆ ಜಾಣಕುರುಡು ಪ್ರದರ್ಶಿಸುತ್ತಿರುವ ಕಾರಣ ಇಂದು ಕರ್ನಾಟಕ ಬಂದ್‌ ಗೆ ಕರೆ ನೀಡಲಾಗಿದ್ದು ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನದ ವತಿಯಿಂದ ಪ್ರತಿಭಟನೆ ಮೂಲಕ ಬೆಂಬಲ ನೀಡಲಾಗಿದೆ ಎಂದರು.

ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನದ ನಗರ ಅಧ್ಯಕ್ಷ ಅಯೂಬ್‌ ಖಾನ್‌ ಮಾತನಾಡಿ,ಸ್ಥಳೀಯರಿಗೆ ದೊರಕಬೇಕಾದ ಉದ್ಯೋಗ ಅನ್ಯರ ಪಾಲಾಗುತ್ತಿದ್ದೆ.ಈ ಹಿನ್ನಲೆಯಲ್ಲಿ ವಿದ್ಯಾವಂತರು ಸಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವಂತಹ ಪ್ರಕರಣಗಳು ಹೆಚ್ಚಾಗುತ್ತಿವೆ.ನಮ್ಮ ರಾಜ್ಯದ ವಿದ್ಯಾವಂತರಿಗೆ ಉದ್ಯೋಗ ದೊರಕಿಸಬೇಕಾದ ಹೊಣೆಗಾರಿಕೆ ಸರ್ಕಾರದ ಮೇಲಿದೆ ಎಂದರು.

Advertisement

ಪ್ರತಿಭಟನೆಯಲ್ಲಿ ಸರ್ಘ‌ಟನೆಯ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಚನ್ನಮರಿಯಪ್ಪ,ಗ್ರಾಮಾಂತರ ಜಿಲ್ಲಾಉಪಧ್ಯಕ್ಷ ಬೆ„ರಪ್ಪ ಕೊನಘಟ್ಟ,ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌ ,ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಮದ್ದೂರಪ್ಪ,ಸಂಘಟನಾ ಕಾರ್ಯದರ್ಶಿ ಶಿವಶಂಕರ್‌ ,ಕಾರ್ಯದರ್ಶಿ ಲೋಕೇಶ್‌,ಉಪಾಧ್ಯಕ್ಷ ರಾಜಶೇಖರ್‌ ,ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರತ್ನಮ್ಮ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next