Advertisement

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

06:11 PM Jun 28, 2024 | Team Udayavani |

ಮುಧೋಳ: ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಆರಂಭಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ನಗರದಲ್ಲಿ ರೈತ ಸಂಘದ ಮುಖಂಡರು ಕಾರ್ಖಾನೆ ಕಾರ್ಮಿಕರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಸೀಲ್ದಾರ್ ಕಚೇರಿ ಬೈಕ್ ರ್‍ಯಾಲಿ ಮೂಲಕ ಆಗಮಿಸಿದ ರೈತರು ಕಾರ್ಖಾನೆ ಆರಂಭಿಸಲು ವಿಳಂಬ ನೀತಿ ಅನುಸರಿಸುತ್ತಿರು ಕಾರ್ಖಾನೆ ವಿರುದ್ಧ ಘೋಷಣೆ ಕೂಗಿದರು.

ತಹಸೀಲ್ದಾರ್ ಕಚೇರಿ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು ಮೂರು ವರ್ಷದಿಂದ ಸ್ಥಗಿತಗೊಂಡಿರುವ ಕಾರ್ಖಾನೆ ಆರಂಭಕ್ಕೆ ಸರ್ಕಾರ ಮುಂದಾಗಿ ರೈತರ ಹಾಗೂ ಕಾರ್ಖಾನೆ ಕಾರ್ಮಿಕರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಕಾರ್ಖಾನೆಯಿಂದಾಗಿ ರೈತರಿಗೆ ಹಾಗೂ ಕಾರ್ಮಿಕರಿಗೆ ಹೆಚ್ಚಿನ ತೊಂದರೆಯುಂಟಾಗುತ್ತಿದೆ. ಸರ್ಕಾರ ಕೂಡಲೇ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು.

ಸ್ಥಳೀಯ ಸಚಿವರು ಅಧಿಕಾರಕ್ಕೆ ಬಂದಕೂಡಲೇ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಕಾರ್ಖಾನೆ ಆರಂಭಕ್ಕೆ ಕ್ರಮ ಕೈಗೊಳ್ಳದಿರುವುದು ದುರ್ದೈವದ ಸಂಗತಿ. ಕೂಡಲೇ ಸಚಿವರು ಕಾರ್ಖಾನೆ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

Advertisement

ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ವಿನೋದ ಹತ್ತಳ್ಳಿ ಅವರು ಮಾತನಾಡಿ, ಜು.4 ಕ್ಕೆ ಕ್ಯಾಬಿನೆಟ್ ದರ್ಜೆಯ ಸಭೆ ಇದ್ದು ಆ ಸಭೆಯಲ್ಲಿ ಕಾರ್ಖಾನೆ ಆರಂಭಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಸೂಚನೆ ಇದೆ. ಅಲ್ಲಿಯವರೆಗೆ ರೈತರು ಶಾಂತಿ ಕಾಪಾಡಿ ಪ್ರತಿಭಟನೆ ಹಿಂಪಡೆಯಬೇಕೆಂದು ಮನವಿ ಮಾಡಿಕೊಂಡರು.

ತಹಸೀಲ್ದಾರ್ ಮಾತಿಗೆ ಒಪ್ಪದ ಪ್ರತಿಭಟನಾಕಾರರು ಮೊದಲು ನಮ್ಮ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮುಂದಾಗಬೇಕು ಇಲ್ಲದೆ ಹೋದರೆ ಜೂ.29ಕ್ಕೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿ ಪ್ರತಿಭಟನೆ ಹಿಂಪಡೆದರು.

ರೈತ ಮುಖಂಡರಾದ ಈರಪ್ಪ ಹಂಚಿನಾಳ, ಸುಭಾಷ ಶಿರಬೂರ, ಯಲ್ಲಪ್ಪ ಹೆಗಡೆ, ಬಿಜೆಪಿ ಮುಖಂಡರಾದ ರಾಜು ಯಡಹಳ್ಳಿ, ಪ್ರಕಾಶ ಚಿತ್ತರಗಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next