Advertisement

ಅವೈಜ್ಞಾನಿಕ ಕಾಮಗಾರಿ ತಡೆಗೆ ಒತ್ತಾಯಿಸಿ ಪ್ರತಿಭಟನೆ

09:54 PM Jan 05, 2022 | Girisha |

ಶಿವಮೊಗ: ಸ್ಮಾರ್ಟ್‌ ಸಿಟಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗ ವತಿಯಿಂದ ನಗರದ ಸ್ಮಾರ್ಟ್‌ ಸಿಟಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ನಡೆಯುತ್ತಿದೆ. ನಗರದ ಬಹುತೇಕ ಕಡೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದರಿಂದ ನಾಗರಿಕರಿಗೆ, ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹೃದಯ ಭಾಗದಲ್ಲಿರುವ ದುರ್ಗಿಗುಡಿ, ಹೊಸಮನೆ, ಶರಾವತಿ ನಗರ, ಜೈಲ್‌ ರಸ್ತೆ ಮುಂತಾದ ಕಡೆಗಳಲ್ಲಿ ಕಾಮಗಾರಿ ನಡೆಸುತ್ತಿರುವ ಇಲಾಖೆಗಳ ನಡುವೆ ಸಮನ್ವಯ ಕೊರತೆ ಇದೆ. ಇದರಿಂದ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ನೂರಾರು ಕೋಟಿ ರೂ. ಜನರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಆರೋಪಿಸಿದರು. ಈ ಕೂಡಲೇ ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಸ್ಮಾರ್ಟ್‌ ಸಿಟಿ ಕಾಮಗಾರಿಗಳಲ್ಲಿ ತೊಡಗಿರುವ ಸಂಬಂಧಿ ಸಿದ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾ ಧಿಸಿ ಜನರ ತೆರಿಗೆ ಹಣ ಪೋಲಾಗುತ್ತಿರುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.

ಸ್ಮಾರ್ಟ್‌ ಸಿಟಿ ಮುಖ್ಯ ಇಂಜಿನಿಯರ್‌ ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಮು ಡಿ., ನರಸಿಂಹ ಗಂಧದಮನೆ, ಎಚ್‌. ಪಾಲಾಕ್ಷಿ. ನಾಗರಾಜ ಕಂಕಾರಿ, ಎಸ್‌. ಬಸವರಾಜ, ಪರಶುರಾಂ ಬಿ., ಮಂಜುನಾಥ ನವುಲೆ, ಎಂ. ರಾಜಣ್ಣ, ದಿನೇಶ್‌, ಎಂ. ಮಂಜುನಾಥ್‌ ಇದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next