Advertisement

ರೈಲು ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ

03:07 PM Sep 13, 2022 | Team Udayavani |

ಶಹಾಬಾದ: ಕೋವಿಡ್‌ಕ್ಕಿಂತಲೂ ಮುಂಚೆ ನಿಲ್ಲುತ್ತಿದ್ದ ಎಲ್ಲಾ ರೈಲುಗಳನ್ನು ಶಹಾಬಾದ ರೇಲ್ವೆ ನಿಲ್ದಾಣದಲ್ಲಿ ನಿಲ್ಲಬೇಕೆಂದು ಆಗ್ರಹಿಸಿ ಮಂಗಳವಾರ ಶಹಾಬಾದ ತಾಲೂಕು ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ರೈಲ್ವೆ ನಿಲ್ದಾಣ ಅಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಶಹಾಬಾದ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಮಯೂರ, ನಗರದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ.ಇಲ್ಲಿನ ಜನರಿಗೆ ಕಲಬುರಗಿಗೆ, ಸೋಲಾಪೂರಗೆ ಹೋಗಲೂ ತೊಂದರೆಯಾಗುತ್ತಿದೆ. ನೌಕರಸ್ಥರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ. ಕೇವಲ ಕಡಿಮೆ ಜನಸಂಖ್ಯೆ ಹೊಂದಿರುವ ಚಿತ್ತಾಪುರ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಾಗುತ್ತಿದೆ. ಅದೇ ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಗರದಲ್ಲಿ ರೈಲು ನಿಲುಗಡೆಯಾಗುತ್ತಿಲ್ಲ.ಈಗಾಗಲೇ ಹಲವು ಬಾರಿ ಪ್ರತಿಭಟನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಶಾಸಕ, ಸಂಸದರಿಗೆ ಮನವಿ ಸಲ್ಲಿಸಿದ್ದೇವೆ. ಆದರೂ ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಕೂಡಲೇ ರೈಲು ನಿಲ್ಲಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೇ ಇದೇ ಸೆಪ್ಟೆಂಬರ್‌ 17ರಂದು ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಶೇಖ ಬಾಬು ಉಸ್ಮಾನ, ನರಸಿಂಹಲೂ ರಾಯಚೂರಕರ್‌, ಭೀಮಾಶಂಕರ ಕಾಂಬಳೆ, ಪಿನಿತ್‌ ಹಳ್ಳಿ, ಮರ್ಗು, ನಾಗಪ್ಪ ರಾಯಚೂರಕರ್‌, ರಾಮು, ಶಿವಶಾಲಕುಮಾರ ಪಟ್ಟಣಕರ್‌, ಕಿರಣ ಚವ್ಹಾಣ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next