Advertisement

ವೇತನಾನುದಾನಕ್ಕೆ ಆಗ್ರಹಿಸಿ ಪ್ರತಿಭಟನೆ

10:44 AM Nov 17, 2019 | Suhan S |

ಧಾರವಾಡ: 1995ರ ನಂತರ ಪ್ರಾರಂಭವಾದ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ, ಆಡಳಿತ ಮಂಡಳಿಗಳ ಹಾಗೂ ನೌಕರರ ಹೋರಾಟ ಸಮನ್ವಯ ಸಮಿತಿಯ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

Advertisement

ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು ಕೆಲ ಹೊತ್ತು ಡಿಸಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡು ಜಿಲ್ಲಾಧಿಕಾರಿ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಬಸವರಾಜ ಹೊರಟ್ಟಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಎನ್‌ಪಿಎಸ್‌ ರದ್ದುಗೊಳಿಸಿ ಒಪಿಎಸ್‌ ಜಾರಿಗೊಳಿಸಬೇಕು. ಶಿಕ್ಷಕ ಮತ್ತು ಮಕ್ಕಳ ಅನುಪಾತವನ್ನು 1:50 ರಂತೆ ಜಾರಿಗೊಳಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ಕೊಡಮಾಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಮಾಡಿ ಕೊಡಬೇಕೆಂದು ಆಗ್ರಹಿಸಲಾಯಿತು. ಅರುಣ ನಾಡಗೀರ, ವಿ.ಎಸ್‌. ಹುದ್ದಾರ, ಎನ್‌.ಎಸ್‌. ಗೋವಿಂದರಡ್ಡಿ, ಎನ್‌.ಎನ್‌. ಸವಣೂರ ಇನ್ನಿತರರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next