Advertisement

Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ

03:59 AM Jan 06, 2025 | Team Udayavani |

ಬೆಂಗಳೂರು: ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಮನವರಿಕೆ ಮಾಡಿ, ಆಶಾ ಕಾರ್ಯಕರ್ತೆಯರು ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಂದತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

Advertisement

ಜ.7ರಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಪ್ರತಿ ತಿಂಗಳು 15 ಸಾವಿರ ರೂ. ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಈ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರು, ಕಾನೂನು ಬಾಹಿರವಾಗಿ ಮುಷ್ಕರದಲ್ಲಿ ಭಾವಹಿಸದಂತೆ ಜಿಲ್ಲಾಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಮನವರಿಕೆ ಮಾಡಬೇಕು. ಇದನ್ನು ಮೀರಿ ಭಾಗವಹಿಸಿದ್ದಲ್ಲಿ ಶಿಸ್ತು ಕ್ರಮ ಜನರುಗಿಸುವಂತೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಜ.7ರಿಂದ ಪ್ರತಿ ದಿನ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪಡೆಯಬೇಕು. ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಗೈರುಹಾಜರಾಗದ ಆಶಾ ಕಾರ್ಯಕರ್ತೆಯರ ಸೇವೆಗಳನ್ನು ಕ್ಷೇತ್ರ ಮಟ್ಟದ ಸಿಬ್ಬಂದಿಯಾದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ನೀಡಲು ಕ್ರಮವಹಿಸಬೇಕೆಂದು ತಿಳಿಸಿದ್ದಾರೆ.

ಆದ್ಯಾಗ್ಯೂ ಸಾರ್ವಜನಿಕರಿಗೆ ವಿಗದಿತ ಆರೋಗ್ಯ ಸೇವೆ ಒದಗಿಸಲು ತೊಡಕಾದ ಸ್ಥಳಗಳಲ್ಲಿ ಈಗಾಗಲೇ ಇಲಾಖೆಯಿಂದ ನೀಡಿರುವ ಮಾನದಂಡದಂತೆ ಹೊಸ ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಲು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ (ಕಾಯಂ /ಗುತ್ತಿಗೆ) ವೈದ್ಯಕೀಯ ತುರ್ತು ಹೊರತುಪಡಿಸಿ ಯಾವುದೇ ತರಹದ ರಜೆಯನ್ನು ನೀಡಬಾರದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next