Advertisement

ಆಸ್ಸಾಂ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

12:00 PM Feb 14, 2022 | Team Udayavani |

ಕಲಬುರಗಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಗ್ಗೆ ಆಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು.

Advertisement

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಹಿಮಂತ್‌ ಬಿಸ್ವಾ ಶರ್ಮಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತ್ತೊಬ್ಬರ ಬಗ್ಗೆ ಕೀಳಾಗಿ ಮಾತನಾಡುವುದು ಬಿಜೆಪಿ ಸಂಸ್ಕೃತಿಯಾಗಿದೆ. ಹಿಮಂತ್‌ ಬಿಸ್ವಾ ಶರ್ಮಾ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರಾದ ರಾಹುಲ್‌ ಗಾಂಧಿ ಬಗ್ಗೆ ಇಲ್ಲ-ಸಲ್ಲದ ಹೇಳಿಕೆ ನೀಡಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇಂತಹ ಮನಸ್ಥಿತಿ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಮುಖಂಡರಾದ ಈರಣ್ಣ ಝಳಕಿ, ಅಮರ ಶಿರವಾಳ, ಪರಶುರಾಮ ನಾಟೀಕಾರ, ಶಕೀಲ ಸರಡಗಿ, ಅಸ್ಲಾಂ ಪಾಷಾ, ಗೋವಿಂದ ಚವ್ಹಾಣ, ಹಣಮಂತ ಚೂರಿ, ಲಕ್ಕಪ್ಪ ಜವಳಿ, ಗೀತಾ, ಸಂಗೀತಾ, ಮಂಜುಳಾ ಪಾಟೀಲ, ಕುಮಾರ ವಠಾuರ, ಶರಣು ಗೌರೆ, ಮಂಜು ಸಿ.ಕೆ., ಶರಣು ಫರತಾಬಾದ, ಸುರೇಶ ರೆಡ್ಡಿ, ಅನೀಲ ಕಪನೂರ, ಸಾಗರ, ಸುರೇಶ, ಮಹೇಶ ವಟವಟಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next