Advertisement

ಸಂಸದ ಪ್ರತಾಪ ಸಿಂಹ ವಿರುದ್ಧ ಕೇಸ್‌ ದಾಖಲಿಸಲು ಒತ್ತಾಯ

03:35 PM Oct 01, 2019 | Team Udayavani |

ಬೀದರ: ಮಹಿಷಾಸುರ ರಾಜರ ದಸರಾ ಹಬ್ಬ ರದ್ದುಗೊಳಿಸಲು ಹಾಗೂ 144ನೇ ಕಲಂ ನಿಷೇದಾಜ್ಞೆ ಜಾರಿಗೊಳಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಗೂಂಡಾ ವರ್ತನೆ ಪ್ರದರ್ಶಿಸಿದ ಮೈಸೂರು ಸಂಸದ ಪ್ರತಾಪ ಸಿಂಹ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಮೂಲ ನಿವಾಸಿಗಳಾದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ದಿನನಿತ್ಯ ಅತ್ಯಾಚಾರ, ದಬ್ಟಾಳಿಕೆಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ಅಮಾನವೀಯ ಕೃತ್ಯ ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಸೆ. 27ರಂದು ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಮೂಲನಿವಾಸಿಗಳ ಶ್ರೇಷ್ಠ ದೊರೆ ಮಹಿಷಾಸುರ ರಾಜರ ದಸರಾ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ವೇದಿಕೆ ತೆರುವುಗೊಳಿಸಿಮೂಲನಿವಾಸಿಗಳ ಸ್ವಾಭಿಮಾನಕ್ಕೆ ಧಕ್ಕೆ ತರಲಾಗಿದೆ. ಸ್ಥಳದಲ್ಲಿದ್ದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಅವಾಚ್ಯವಾಗಿ

ನಿಂದಿಸಿ ಬೇಜವಾಬ್ದಾರಿತನ ತೋರಿದ್ದಾರೆ. ಭಾವೈಕ್ಯತೆ ವಿರುದ್ಧವಾಗಿ ನಡೆದುಕೊಂಡು ಶಾಂತಿ ಭಂಗ ಮಾಡಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದರು.

ಮನುವಾದದ ಮನಸುಳ್ಳ ಸಂಸದ ಪ್ರತಾಪ ಸಿಂಹ ಮಹಿಷಾ ದಸರಾ ಹಬ್ಬ ನಡೆಯ ದಂತೆ ತಡೆಹಿಡಿದು ಮೂಲ ನಿವಾಸಿಗಳು ಮತ್ತು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತಂದು ಶಾಂತಿ ಭಂಗ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next