Advertisement
18 ಸಾವಿರ ವೇತನ ನೀಡಿ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯ ಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಮಾಸಿಕ 18,000 ರೂ. ವೇತನ ನೀಡಬೇಕು.
ಘೋಷಿಸಬೇಕು, ಅಂಗನವಾಡಿ ಮತ್ತು ಬಿಸಿಯೂಟ ಯೋಜನೆಯನ್ನು ಎನ್‌ಜಿಒಗೆ ವಹಿಸುವ ಹುನ್ನಾರ ನಡೆಯುತ್ತಿದ್ದು, ಇದನ್ನು ಕೈಬಿಟ್ಟು ಪ್ರಸ್ತುತ ದುಡಿಯುತ್ತಿರುವವರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದಕ್ಕೂ ಮುನ್ನ
ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಸಿ ಜಿಲ್ಲಾಧ್ಯಕ್ಷೆ ಪಿ.ಎಸ್. ಸಂಧ್ಯಾ, ಸೀಮಾ, ಕೋಮಲ, ಮಂಜುಳಾ, ಗಿರಿಜಾ ಇನ್ನಿತರರು ಪಾಲ್ಗೊಂಡಿದ್ದರು. ರಕ್ಷಣಾ ವೇದಿಕೆ ಪ್ರತಿಭಟನೆ: ಕನ್ನಡಿಗರನ್ನು ಹರಾಮಿಗಳು ಎಂದು ಟೀಕಿಸಿದ ಗೋವಾ ಸಚಿವ ವಿನೋದ್ ಪಾಲೇಕರ್ ವಜಾಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ನಗರದ ನ್ಯಾಯಾಲಯ ಮುಂಭಾಗದ ಗಾಂಧಿ ಪುತ್ಥಳಿ ಎದುರು ಪ್ರತಿಭಟನೆ ನಡೆಸಿದರು. ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವರಿಗೆ ತಕ್ಕ ಪಾಠ ಕಲಿಸಬೇಕು. ನೀರಿನ ವಿಚಾರದಲ್ಲಿ ತಗಾದೆ ತಗೆಯುವ ಜತೆಗೆ, ಕನ್ನಡಿಗರ ಸ್ವಾಭಿಮಾನ ಕೆಣಕಿದವರಿಗೆ ತಕ್ಕ ಪಾಠ ಕಲಿಸಲು ಮುಂದಾಗ
ಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಕೆ.ಮಾದೇಶ್, ಪದಾಧಿಕಾರಿಗಳಾದ ಮಂಜುನಾಥ್, ಕಿರಣ್, ಜಗದೀಶ್, ಸೋಮ, ಕುಶಾಲ್ ಭಾಗವಹಿಸಿದ್ದರು.
Related Articles
ಒತ್ತಾಯಿಸಿದರು. ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ಕುಲಪತಿ ಪ್ರೊ.ಸಿ.ಬಸವರಾಜು, ಈ ಬಗ್ಗೆ ಸರ್ಕಾರಕ್ಕೆ ಪತ್ರಬರೆದು ಲ್ಯಾಪ್‌ಟಾಪ್ ಕೊಡುವಂತೆ ಮನವಿ ಮಾಡಲಾಗುವುದು ಎಂದರು.
Advertisement