Advertisement

ಫ್ರೀಡಂ ಪಾರ್ಕ್‌ಗಾಗಿ ಪ್ರತಿಭಟನೆ

12:53 PM Jan 25, 2018 | Team Udayavani |

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾಯಿಸಲು ಮುಂದಾಗಿರುವ ಸರ್ಕಾರದ ನಿಲುವು ಖಂಡಿಸಿ ಜ.27ರಂದು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ನಿರ್ಧರಿಸಿದೆ.

Advertisement

ಸ್ವಾತಂತ್ರ್ಯ ಉದ್ಯಾನದ ಆವರಣದಲ್ಲಿ ಎರಡು ಎಕರೆ ಜಾಗವನ್ನು ಪ್ರತಿಭಟನೆಗೆ ಮೀಸಲಿಡ ಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ರುವ ಫ್ರೀಡಂ ಪಾರ್ಕ್‌ನ 22 ಎಕರೆ ಪ್ರದೇಶ ವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾ ಯಿಸಲು
ಸರ್ಕಾರ ಚಿಂತನೆ ನಡೆಸುತ್ತಿದೆ. ಇದರ ಹಿಂದೆ ಹೋರಾಟಗಾರರ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ಅಡಗಿದೆ. ಹೀಗಾಗಿ ಜ.27ರಂದು ಪ್ರತಿಭಟನೆ ನಡೆಸಲಿದ್ದೇವೆ ಎಂದು ಸಿಐಟಿಯು ಅಧ್ಯಕ್ಷೆ ಎಸ್‌.ವರಲಕ್ಷ್ಮೀ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಫ್ರೀಡಂಪಾರ್ಕ್‌ನಲ್ಲಿ ಖಾಸಗಿ ಸಂಸ್ಥೆಗಳ ವಸ್ತು ಪ್ರದರ್ಶನ ಹಾಗೂ ವಾಣಿಜ್ಯ ವ್ಯವಹಾರಕ್ಕಾಗಿ ಬಿಬಿಎಂಪಿ ಅನುಮತಿ ನೀಡುತ್ತಿದೆ. ಇದರಿಂದ ಸರ್ಕಾರಕ್ಕೆ ಸಾಕಷ್ಟು ಆದಾಯ ಬರುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಿನಲ್ಲಿ 22
ಎಕರೆ ಜಾಗವನ್ನು ಬಿಬಿಎಂಪಿಯಿಂದ ಪ್ರವಾಸೋದ್ಯಮ ಇಲಾಖೆಗೆ ನೀಡಲಾಗುತ್ತಿದೆ. ಇದರಿಂದ ಸರ್ಕಾರ ಹೋರಾಟಗಾರರಿಗೆ ವಂಚನೆ ಮಾಡಿದಂತಾಗುತ್ತದೆ ಎಂದು ಆರೋಪಿಸಿದರು. 

ಉದ್ಯಾನದಲ್ಲಿ ಪ್ರತಿಭಟನೆಗೆ ಮೀಸಲಿಟ್ಟಿರುವ ಐದು ಎಕರೆ ಜಾಗದಲ್ಲಿ ಮೂರು ಎಕರೆ ಜಾಗವನ್ನು ಪಾರ್ಕಿಂಗ್‌ ಕಟ್ಟಡಕ್ಕೆ ನೀಡಲಾಗಿದೆ. ಉಳಿದ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದೆ ಹೋರಾಟಗಾರರಿಗೆ ಮೀಸಲಿಟ್ಟಿರುವ
ಜಾಗವನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next