Advertisement
ಡೀಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆದಾಯ ತೆರಿಗೆವ್ಯಾಪ್ತಿಗೆ ಬರದ ಬಡಕುಟುಂಬಗಳಿಗೆ 6 ತಿಂಗಳವರೆಗೆ 7500 ರೂ. ವರ್ಗಾವಣೆ ಮಾಡಬೇಕು. 6 ತಿಂಗಳವರೆಗೆ ತಲಾ 10 ಕೆಜಿ ಉಚಿತ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಿ ಕೂಲಿದರ ಏರಿಸಿ, 200 ದಿನಗಳ ಕೆಲಸ ಖಾತ್ರಿಪಡಿಸಬೇಕು. ನಗರ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.
Related Articles
Advertisement
ಜನವಿರೋಧಿ ನೀತಿಗೆ ಖಂಡನೆ : ಮದ್ದೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಭಾರತ ಕಮ್ಯೂನಿಷ್ಟ್ ಪಕ್ಷದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆಹಾಕಿ ಶನಿವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಜನ ವಿರೋಧಿ ಯೋಜನೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟ: ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಘೋಷಿಸಿದ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಗಳಿಗೆ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ. ಕೂಡಲೇ ಎಲ್ಲಾ ವರ್ಗದ ಜನರಿಗೆ ಪರಿಹಾರ ಒದಗಿಸುವಂತೆ ಕೋವಿಡ್ ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ನೆರವು ನೀಡಲು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು.
ಉದ್ಯೋಗ ಖಾತರಿ ವಿಸ್ತರಿಸಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸಿ, ಕೂಲಿ ದರವನ್ನು ಹೆಚ್ಚಳ ಮಾಡುವ ಜತೆಗೆ ವರ್ಷದ 200 ದಿನಗಳ ಕೆಲಸವನ್ನು ನೀಡಬೇಕು. ಸಾರ್ವಜನಿಕ ಆರೋಗ್ಯಕ್ಕೆ ಕೇಂದ್ರೀಯ ವೆಚ್ಚವನ್ನು ಕನಿಷ್ಠ ಜಿಡಿಪಿಯ ಶೇ.3ಕ್ಕೆ ಹೆಚ್ಚಿಸಬೇಕು. ಬೇಡಿಕೆ ಈಡೇರಿಸುವಂತೆ ತಪ್ಪಿದಲ್ಲಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯಕರ್ತರಾದ ಡಿ. ಸಿದ್ದರಾಜು, ವಿಷಕಂಠೇಗೌಡ, ರಾಮಚಂದ್ರು, ಸಿದ್ದೇಗೌಡ, ಡಿ.ಕೆ.ಲತಾ, ಶೋಭಾ, ಜಯಮ್ಮ, ಮಹದೇವಸ್ವಾಮಿ, ಹನುಮೇಶ್ ಹಾಜರಿದ್ದರು.