Advertisement

ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

10:17 AM Jun 15, 2019 | Team Udayavani |

ಗದಗ: ಕಳೆದ ನಾಲ್ಕೈದು ವರ್ಷಗಳಿಂದ ಜಿಲ್ಲೆಯು ಬರಗಾಲದಿಂದ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಸಮಪರ್ಕವಾಗಿ ಬರ ಪರಿಹಾರ ಕೈಗೊಳ್ಳುವುದರ ಜೊತೆಗೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿದರು.

Advertisement

ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಪ್ರಚಾರಕ್ಕೆ ಸೀಮಿತವಾಗಿದೆ. ವೈಜ್ಞಾನಿಕ ಬೆಲೆ ನಿಗದಿ, ಬೆಲೆ ನಿಗದಿ ಮತ್ತು ನಿಯಂತ್ರಣ ಆಪತ್ಕಾಲಿನ ನಿಧಿ ಸ್ಥಾಪನೆ, ಬೆಳೆ ವಿಮೆಯನ್ನು ಸರಕಾರವೇ ತುಂಬುವ ಯೋಜನೆ ಜಾರಿಗೆ ತರಬೇಕು. ಬರಗಾಲದ ಸಂದರ್ಭದಲ್ಲಿ ಬೆಳೆಹಾನಿ ಸಮೀಕ್ಷೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಮಹದಾಯಿ (ಕಳಸಾ-ಬಂಡೂರಿ) ಯೋಜನೆಗೆ ಸರಕಾರ ಸಮರೋಪಾದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಶಾಶ್ವತ ಬರಗಾಲ ನಿವಾರಣೆಗೆ ಸಮಗ್ರ ನೀರಾವರಿ ಯೋಜನೆ ಜಾರಿಗೆ ತರಬೇಕು. ಕಬ್ಬಿನ ಬಾಕಿ ಹಣ ತಕ್ಷಣವೇ ಬಿಡುಗಡೆ ಮಾಡಬೇಕು. ಸಕ್ಕರೆ ಕಾರ್ಖಾನೆಗಳು ರೈತರೊಂದಿಗೆ ಸಬ್‌ರಜಿಷ್ಟರ್‌ ಕಚೇರಿಯಲ್ಲಿ ನೋಂದಣಿ ಕರಾರು ಪತ್ರ ಕಡ್ಡಾಯಗೊಳಿಸಬೇಕು. 60 ವರ್ಷ ಮೀರಿದ ರೈತರಿಗೆ ಮಾಸಿಕ 6000 ರೂ. ಪಿಂಚಣಿ ಹಣ ಒದಗಿಸಬೇಕು. ನೈಸರ್ಗಿಕ ವಿಪತ್ತಿನಿಂದ ಆಸ್ತಿ ಹಾನಿಗೆ 5 ಪಟ್ಟು ಪರಿಹಾರ ನೀಡಬೇಕು. ಚಳವಳಿ ಸಂದರ್ಭದಲ್ಲಿ ರೈತರ ಮತ್ತು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ಕೈಬಿಡಬೇಕು. ಜಿಂದಾಲ್ ಕಂಪನಿಗೆ ಭೂಮಿ ಕೊಡಲು ಕೈಗೊಂಡಿರುವ ಸಂಪುಟ ನಿರ್ಣಯ ಹಿಂಪಡೆದು, ರಾಜ್ಯಪತ್ರ ಹೊರಡಿಸಬೇಕು. ರಾಜ್ಯದಲ್ಲಿ ರೈತರ ಸಾಲ ಮನ್ನಾ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ, ರಾಜ್ಯ ಕಾರ್ಯಾಧ್ಯಕ್ಷ ಕೆ.ಜಿ. ಶಾಂತಸ್ವಾಮಿಮಠ, ನೂಲೆನೂರು ಎಂ. ಶಂಕರಪ್ಪ, ಚೆ.ಎಂ. ವೀರಸಂಗಯ್ಯ, ರವಿಕಿರಣ ಪೂರ್ಣಚ್ಛ, ಆರ್‌.ಎಸ್‌. ಮಠ, ಟಿ.ಟಿ. ರಾಮಸ್ವಾಮಿ, ಎಂ. ರಾಮು, ರವಿಕುಮಾರ ಬಲ್ಲೂರ, ಪಿ. ಗೋಪಾಲ, ಎಂ.ಬಿ. ಸಂಕನಗೌಡ್ರ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next