Advertisement

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

02:08 PM Oct 04, 2020 | Suhan S |

ಗುಡಿಬಂಡೆ: ಕೋವಿಡ್ ನಿಯಂತ್ರಿಸುವಲ್ಲಿ ಮತ್ತು ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದರೂ ಸಹ ಸರ್ಕಾರ ನಮಗೆ ಸೇವಾ ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

Advertisement

ಪ್ರತಿಭಟನೆ ಉದ್ದೇಶಿ ಸಂಘಟನೆಯ ತಾಲೂಕು ಅಧ್ಯಕ್ಷ ಈಶಣ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಸುಮಾರು 15ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಕಳೆದ 7 ತಿಂಗಳಿನಿಂದ ಸರಿಯಾಗಿ ಮನೆಗಳಿಗೆ ಹೋಗದೆ ಕೋವಿಡ್ ತಡೆಗೆ ಮತು ಜಾಗೃತಿ ಮೂಡಿಸುವಲ್ಲಿ ಹಗಲಿರುಳು ದುಡಿದಿದ್ದೇವೆ. ಆದರೆ ನಮ್ಮ ದುಡಿಮೆಗೆ ಸಮಾನ ವೇತನ ಸರ್ಕಾರ ನೀಡುತ್ತಿಲ್ಲ. ಕೂಡಲೇ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಗುತ್ತಿಗೆಮತ್ತು ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಸಂಚಾಲಕಿ ಮುನಿರತ್ನಮ್ಮ ಮಾತನಾಡಿ, ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಅವಧಿ ವಿಸ್ತರಿಸಬೇಕು, ಮುಷ್ಕರ ಸಮಯದಲ್ಲಿ ಕಡಿತಗೊಳಿಸಿರುವ ವೇತನ ನೀಡಬೇಕು ಹಾಗೂ ನೌಕರರ ಕಲ್ಯಾಣ ನಿಧಿ ಅಥವಾ ಕಲ್ಯಾಣ ಮಂಡಳಿಗಳನ್ನು ರಚಿಸಬೇಕು ಒತ್ತಾಯಿಸಿದರು. ತಾಲೂಕು ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ಭಾಗವಹಿಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next