Advertisement

ನಗರದಲ್ಲಿ ಸಮಸ್ಯೆ ನಿವಾರಣೆಗೆ ಆಗ್ರಹ

01:13 PM Dec 20, 2019 | Suhan S |

ಚಿಂತಾಮಣಿ: ನಗರದಲ್ಲಿ ಕುಡಿಯುವ ನೀರು, ಸ್ವತ್ಛತೆ, ಒಳಚರಂಡಿ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಪ್ರತಿನಿತ್ಯ ತಾಂಡವಾಡುತ್ತಿರುವ ಅನೇಕ ಸಮಸ್ಯೆಗಳನ್ನು ನಿವಾರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಪದಾಧಿಕಾರಿಗಳು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

Advertisement

ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಜಾಥಾ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಬಳಿಕ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪೌರಾಯುಕ್ತ ಹರೀಶ್‌ಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಉಪಾಧ್ಯಕ್ಷ ಸಿ.ಕೃಷ್ಣೋಜಿರಾವ್‌ ಮಾತನಾಡಿ, ನಗರದ ಎಲ್ಲಾ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಸ್ವತ್ಛತೆ, ರಸ್ತೆ, ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಒಳಚರಂಡಿಗಳು ಸ್ವತ್ಛತೆ ಇಲ್ಲದೇ ಸಾಂಕ್ರಾಮಿಕರೋಗಗಳು ಹರಡುವ ಭೀತಿಯಲ್ಲಿ ಜನತೆ ಇದ್ದು, ನಗರಸಭೆಯ ಕಂದಾಯ ಶಾಖೆಯಲ್ಲಿ ಇ-ಸ್ವತ್ತು ಮಾಡಿಕೊಡುವಿಕೆ ಖಾತೆ ಬದಲಾವಣೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದುಅಧಿಕಾರಿಗಳೇ ದಲ್ಲಾಳಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಗುರುತಿನ ಚೀಟಿ ತಿದ್ದುಪಡಿ,ವರ್ಗಾವಣೆ ಇತ್ಯಾದಿಗಳಲ್ಲಿ ಆನ್‌ಲೈನ್‌ನಲ್ಲಿ ಆರ್ಜಿ ಸಲ್ಲಿಸಿದ್ದರೂ ಸಹ ಸಕಾಲಕ್ಕೆ ಕೆಲಸ ಮಾಡುತ್ತಿಲ್ಲ, ಸಮರ್ಪಕ ನೀರು ಸರಬರಾಜು ಇಲ್ಲದೇ ಇರುವುದು, ತಿಂಗಳುಗಳೇ ಕಳೆದರೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಫ‌ುಟ್‌ಪಾತ್‌ ವ್ಯಾಪಾರಸ್ಥರಿಗೆ ವ್ಯವಸ್ಥಿತ ಸ್ಥಳ ಗುರುತಿಸಿಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕ ವೆಂಕಟರವಣರೆಡ್ಡಿ, ತಾಲೂಕು ಅಧ್ಯಕ್ಷ ವೆಂಕಟಗಿರಿಕೋಟೆ ಆಸೀಫ್, ಕಾರ್ಯಾಧ್ಯಕ್ಷ ಬೀರೇಗೌಡ, ತಾಲೂಕು ಗೌರವಾಧ್ಯಕ್ಷ ಕಾರ್ತಿಕ್‌, ಜಿಲ್ಲಾ ಉಪಾಧ್ಯಕ್ಷ ವೆಂಕಟರತ್ನಮ್‌, ಕೃಷ್ಣ, ಖಾದರ್‌ವಲ್ಲಿ, ಅರ್ಚನಾ, ಸುವರ್ಣ, ಸರಸ್ವತಿ, ಶೋಭಾ ಮುಖಂಡರಾದ  ಪ್ರದೀಪ್‌, ಕೋನಪಲ್ಲಿ ಕೋದಂಡ, ನಾಗರಾಜ್‌ ಸೇರಿದಂತೆ ಮತಿತ್ತರರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next