Advertisement

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

04:07 PM Dec 06, 2020 | Suhan S |

ಸಿರುಗುಪ್ಪ: ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಕರ್ನಾಟಕ ದೇವದಾಸಿಯರ ವಿಮೋಚನ ಸಂಘದ ತಾಲೂಕು ಘಟಕದ ಪದಾಧಿ ಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಸಂಘದ ತಾಲೂಕು ಅಧ್ಯಕ್ಷೆ ಈರಮ್ಮ ಮಾತನಾಡಿ, ಕಳೆದ 4 ವರ್ಷಗಳಿಂದವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಪ್ರತಿಭಟನೆ ಮಾಡುತ್ತಲೇ ಇದ್ದೇವೆ. ಆದರೆ ಇಲ್ಲಿಯವರೆಗೆ ಸರ್ಕಾರ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ. ದೇವದಾಸಿಯರಿಗೆ ನೀಡುವ ಮಾಸಿಕ ಸಹಾಯಧನವನ್ನು ಮುಂಬರುವ ಬಜೆಟ್‌ನಲ್ಲಿ ರೂ.1500/ಕ್ಕೆ ಹೆಚ್ಚಿಸ ಬೇಕು, ಗಣತಿ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ  ಯರನ್ನು ತಕ್ಷಣವೇ ಸೇರ್ಪಡೆ ಮಾಡಿ ಅವರಿಗೆ ನೆರವು ನೀಡಬೇಕು.

ದೇವದಾಸಿಯರ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನ ನೀಡುವುದಾಗಿ ಸರ್ಕಾರ ಭರವಸೆ ನೀಡಿದ್ದು, ಇಲ್ಲಿಯವರೆಗೆ ಕೆಲವರಿಗೆ ಮಾತ್ರ ಸಹಾಯಧನವನ್ನು ನೀಡಲಾಗಿದೆ. ಆದ್ದರಿಂದ ಎಲ್ಲರಿಗೂ ಸಹಾಯಧನ ವಿತರಿಸಬೇಕು, ಕನಿಷ್ಠ 5 ಎಕರೆ ನೀರಾವರಿ ಜಮೀನನ್ನು ಕೊಡಬೇಕು, ತಾಲೂಕಿನಲ್ಲಿ ಕನಿಷ್ಠ 100ಜನ ದೇವದಾಸಿ ಫಲಾನುಭವಿಗಳಿಗೆ ಜಮೀನು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ದೇವದಾಸಿ ಪುನರ್ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ತಪ್ಪಿಸಲುಫಲಾನುಭವಿ ಗಳ ಆಯ್ಕೆಯನ್ನು ಸಾರ್ವಜನಿಕರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಮಾಡಬೇಕು, ಅದೇ ಮಾದರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ನೆರವು ನೀಡಲು ಕ್ರಮ ತೆಗೆದುಕೊಳ್ಳಬೇಕು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಜಿಲ್ಲಾ, ತಾಲೂಕು, ಗ್ರಾಪಂಗಳಲ್ಲಿ ಪ್ರಕಟಿಸಬೇಕೆಂದು ಒತ್ತಾಯಿಸಿದರು.

ಉಪಾಧ್ಯಕ್ಷೆ ಅಂಬಮ್ಮ, ಪ್ರಧಾನ ಕಾರ್ಯದರ್ಶಿ ಎಚ್‌. ದುರುಗಮ್ಮ ಮತ್ತು ಪದಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next