Advertisement

ಬಂಧಿತ ರೈತರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

12:49 PM Jun 25, 2022 | Team Udayavani |

ಕಲಬುರಗಿ: ಚಿತ್ತಾಪುರ ಓರಿಯಂಟ್‌ ಸಿಮೆಂಟ್‌ ಕಾರ್ಖಾನೆ ಎದುರು ಧರಣಿ ಮಾಡುತ್ತಿದ್ದ ರೈತರನ್ನು ಬಂಧಿಸಿರುವುದನ್ನು ಖಂಡಿಸಿರುವ ಸಿಪಿಐ(ಎಂ) ಮುಖಂಡರು ಕೂಡಲೇ ಬಂಧಿತರನ್ನು ಬಿಡುಗಡೆ ಮಾಡಬೇಕು, ಕಾರ್ಖಾನೆಯಿಂದ ಹಾನಿಯಾಗಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಮಾಡಿ, ಓರಿಯಂಟ್‌ ಸಿಮೆಂಟ್ಸ್‌ 1750 ಎಕರೆ ಭೂಮಿ ಖರೀದಿ ಮಾಡಿದೆ. ಭೂಮಿಗೆ ಸರಿಯಾದ ಬೆಲೆ ನೀಡಿಲ್ಲ. ಭೂಮಿ ಕಳೆದುಕೊಂಡ ರೈತರ ಕುಟುಂಬಕ್ಕೆ ನೌಕರಿ ನೀಡಿಲ್ಲ. ಕಾರ್ಖಾನೆ ಧೂಳಿನಿಂದಾಗಿ ಹಲವಾರು ಎಕರೆ ಭೂಮಿಯಲ್ಲಿ ಬೆಳೆ ಹಾಳಾಗುತ್ತಿವೆ. ಇದಕ್ಕೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳು ಪ್ರತಿಭಟನೆಗಾರರನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇದು ಖಂಡನೀಯ. ಕೂಡಲೇ ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ಬಂಧಿತರ ರೈತರು, ರೈತ ಮಹಿಳೆಯರನ್ನು ಬಿಡುಗಡೆ ಮಾಡಬೇಕು ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ನೀಲಾ, ಭೀಮ ಶೆಟ್ಟಿ ಯಂಪಳ್ಳಿ, ಮಲ್ಲಿಕಾರ್ಜುನ ಸಜ್ಜನ್‌, ಶ್ರೀಮಂತ ಬಿರಾದಾರ್‌, ಗೌರಮ್ಮ ಪಾಟೀಲ, ಶರಣಬಸಪ್ಪ ಮಮಶೆಟ್ಟಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next