Advertisement

ಆಶ್ರಯ ಮನೆ ಮಂಜೂರಾತಿಗೆ ಪ್ರತಿಭಟನೆ

03:41 PM Jul 23, 2019 | Team Udayavani |

ಬೆಳಗಾವಿ: ಆಶ್ರಯ ಮನೆಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ರಾಷ್ಟ್ರವಾದಿ ಕಾಂಗ್ರೆಸ್‌ ಪಕ್ಷದ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಮನೆಗಳಿಲ್ಲದೇ ಅನೇಕ ಕುಟುಂಬಗಳು ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ. ಆಶ್ರಯ ಮನೆಗಳಿಗಾಗಿ ಸಂಬಂಧಿಸಿದ ಇಲಾಖೆಗಳನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳಗಾವಿಯ ಆಝಾದ ನಗರದಲ್ಲಿ ಅನೇಕ ಕುಟುಂಬಗಳ ಸದಸ್ಯರು ತಗಡಿನ ಶೆಡ್‌ಗಳಲ್ಲಿ ವಾಸಿಸುತ್ತಿದ್ದಾರೆ. ಈ ಕುಟುಂಬಕ್ಕೆ ಸ್ವಂತ ಜಾಗ ಹಾಗೂ ಮನೆ ಇಲ್ಲದಿರುವುದರಿಂದ ಎಲ್ಲೆಂದರಲ್ಲಿ ವಾಸಿಸುವ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ಆಶ್ರಯ ಮನೆಗಳನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಪಾಲಿಕೆ ವ್ಯಾಪ್ತಿಯ ಆನಿಗೋಳ, ಮಜಗಾಂವ, ಕಣಬರಗಿ, ಅಲಾರವಾಡ, ಬಸವನ ಕುಡಚಿ, ಉದ್ಯಮಬಾಗ, ವಂಟಮೂರಿ ಸೇರಿದಂತೆ ವಿವಿಧೆಡೆಯೂ ಅನೇಕ ಕುಟುಂಬಗಳು ಕೊಳಚೆ ಪ್ರದೇಶದಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿವೆ. ಕೊಳಚೆ ನಿರ್ಮೂಲನೆ ಮಂಡಳಿಯಿಂದ ನಗರದಲ್ಲಿ ಮತ್ತೂಮ್ಮೆ ಸರ್ವೇ ಮಾಡಿ ಅರ್ಹ ಜನರಿಗೆ ಆಶ್ರಯ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗ್ರಾಮೀಣ ಅಧ್ಯಕ್ಷ ದುರ್ಗೇಶ ಮೇತ್ರಿ, ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ಪ್ರಭಾವತಿ ಭಾಲೇಕರ, ನಗರ ಘಟಕದ ಅಧ್ಯಕ್ಷ ಸದಾನಂದ ಪಾಟೀಲ, ಭಾರತಿ ಭಾಲೇಕರ, ಸುಪ್ರಿಯಾ ಮೋಟೆಕಾರ, ಕೆ.ಜಿ. ಪಾಟೀಲ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next