Advertisement

ಎಸ್‌ಸಿ ಪ್ರಮಾಣಪತ್ರಕ್ಕಾಗಿ ಪ್ರತಿಭಟನೆ

06:29 AM Feb 16, 2019 | Team Udayavani |

ಬೆಂಗಳೂರು: ಬೇಡ ಜಂಗಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಿರುವುದನ್ನು ಖಂಡಿಸಿ ಅಖೀಲ ಕರ್ನಾಟಕ ಡಾ. ಅಂಬೇಡ್ಕರ್‌ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಸದಸ್ಯರು ನಗರದ ಟೌನ್‌ ಹಾಲ್‌ ಎದುರು ಪ್ರತಿಭಟನೆ ನಡೆಸಿದರು.

Advertisement

ಬೇಡ ಜಂಗಮ ಸಮುದಾಯಕ್ಕೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ನೀಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದ್ದರೂ, ಕಂದಾಯ ಇಲಾಖೆ ಅಧಿಕಾರಿಗಳು ಪ್ರಮಾಣ ಪತ್ರ ನೀಡದೇ ಅನ್ಯಾಯ ಮಾಡುತ್ತಿದ್ದಾರೆ.

ರಾಜ್ಯ ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ ಆದೇಶ ನೀಡಿದರೂ, ಸರ್ಕಾರಿ ಅಧಿಕಾರಿಗಳು ಸುಳ್ಳು ಹೇಳಿ ಸಮಾಜಕ್ಕೆ ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ದೊರೆಯುವ ಅವಕಾಶದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next