ವಿದ್ಯಾರ್ಥಿವೇತನ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
Team Udayavani, Nov 29, 2020, 4:46 PM IST
ಕಲಬುರಗಿ: ಶಾಲೆ, ಕಾಲೇಜು ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ, ಅಲ್ಪಸಂಖ್ಯಾತ ಅಭ್ಯರ್ಥಿಗಳ ಫೆಲೋಷಿಪ್‌ಗೆ ನೀಡುವ ಪ್ರೋತ್ಸಾಹ ಧನ ಕಡಿತ ಮಾಡಿದ ಸರ್ಕಾರದ ಕ್ರಮ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವತಿಯಿಂದ ನಗರದ ಸರ್ದಾರ್ ವಲ್ಲಭಾಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನಾ ಪ್ರರ್ದಶನ ನಡೆಸಲಾಯಿತು.
ಸ್ಕಾಲರ್‌ಷಿಪ್ ಕೊಡಿ ರಾಜ್ಯ ವ್ಯಾಪಿ ಆಂದೋಲನ ಭಾಗವಾಗಿ ಪ್ರತಿಭಟನೆ ಕೈಗೊಂಡಿದ್ದ ಸಂಘಟನೆ ಸದಸ್ಯರು, ಕೋವಿಡ್ ದಿಂದ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪೋಷಕರು ಮಕ್ಕಳು ಪ್ರವೇಶ ಶುಲ್ಕ ಕಟ್ಟಲು ಪರದಾಡುವಂತಾಗಿದೆ. ಇನ್ನೊಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದೇ ಕಂತಿನಲ್ಲಿ ಎಲ್ಲ ಶುಲ್ಕ ಕಟ್ಟುವಂತೆ ಒತ್ತಾಯಿಸುತ್ತಿವೆ. ಇದರ ಮಧ್ಯೆ ಸರ್ಕಾರದ ಸ್ಕಾಲರ್‌ಷಿಪ್ ವ್ಯವಸ್ಥೆಯೂ ಸರಿಯಾಗಿಲ್ಲ. ಇದರಿಂದ ವಿದ್ಯಾರ್ಥಿಗಳ ಬದುಕು ಚಿಂತಾಜನಕವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಶಿಕ್ಷಣ ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್, ವಿದ್ಯಾಸಿರಿ, ಅರಿವು ಸೇರಿ ಮುಂತಾದ ಯೋಜನೆಗಳನ್ನು ಪ್ರಕಟಿಸಿದೆ. ಆದರೆ, ಅರ್ಜಿಯನ್ನು ಸಣ್ಣಪುಟ್ಟ ಕಾರಣವೊಡ್ಡಿ ವಿಲೇವಾರಿ ಮಾಡದೇಅನೂರ್ಜಿತ ಮಾಡಲಾಗುತ್ತಿದೆ. ಇದರಿಂದಶಿಷ್ಯವೇತನದಿಂದ ವಂಚನೆ ಮಾಡಲಾಗುತ್ತಿದೆ. ಕೆಲವರಿಗೆ ಮಂಜೂರಾದರೂ ಇದೂವರೆಗೆ ಖಾತೆಗೆ ಹಣ ಜಮೆ ಆಗಿಲ್ಲ. ವಿದ್ಯಾರ್ಥಿಗಳುಕಲಿಕೆ ಬಿಟ್ಟು ಇಲಾಖೆ ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಸರ್ಕಾರ ಈ ತಾಂತ್ರಿಕ ಸಮಸ್ಯೆ ಬಗೆಹರಿಸಿಲ್ಲ.ಮೇಲಾಗಿ ನ.9ರಂದು ಅಲ್ಪಸಂಖ್ಯಾತರ ಇಲಾಖೆಯು ಪಿಎಚ್.ಡಿ ಮತ್ತು ಎಂμಲ್ ಫೆಲೋಷಿಪ್ ನೆರವನ್ನು ಕಡಿತಗೊಳಿಸಿದೆ. ತಿಂಗಳಿಗೆ ತಲಾ 25 ಸಾವಿರ ರೂ. ಪ್ರತಿ ವಿದ್ಯಾರ್ಥಿಗೆ ಪ್ರೋತ್ಸಾಹ ಧನ ಹಾಗೂ ವಾರ್ಷಿಕ 10 ಸಾವಿರ ರೂ. ನಿರ್ವಹಣಾ ವೆಚ್ಚ ನೀಡಲಾಗುತ್ತಿತ್ತು. ಇದೀಗ ಸರ್ಕಾರ ದಿಢೀರ್ ಆಗಿ ಪ್ರೋತ್ಸಾಹ ಧನವನ್ನು 10 ಸಾವಿರಕ್ಕೆ ಇಳಿಸಿದ್ದು, ವಾರ್ಷಿಕ ನಿರ್ವಹಣಾ ವೆಚ್ಚವನ್ನು ಸಂಪೂರ್ಣ ಹಿಂದಕ್ಕೆ ಪಡೆದಿದೆ. ಇದು ಉನ್ನತ ವ್ಯಾಸಂಗದ ಕನಸಿಗೆ ಪೆಟ್ಟು ನೀಡಿದೆ ಎಂದು ಆಳಲು ತೋಡಿಕೊಂಡಿದರು.
ಇದು ಸರ್ಕಾರದ ದುರುದ್ದೇಶದ ನಡೆಯಾಗಿದ್ದು, ಫೆಲೋಷಿಪ್ ಮುಂದುವರಿ ಸಬೇಕು. ಸ್ಕಾಲರ್‌ಷಿಪ್‌ನಲ್ಲಿ ಉಂಟಾಗಿರುವ ಅವ್ಯವಸ್ಥೆ ಸರಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸದಾಖತ್ ಷಾ, ಸಂಘಟನೆ ರಾಜ್ಯ ಸಮಿತಿ ಸದಸ್ಯ ಸಯ್ಯದ್ ಸಫìರಾಜ್, ಜಿಲ್ಲಾ ಘಟಕದ ಕಾರ್ಯದರ್ಶಿ ಶೇಖ್ ಝಹೀಮ್, ಸದಸ್ಯ ಶೇಖ್ ತಹಾ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ಸಿಮೆಂಟ್ ಕಾರ್ಖಾನೆ; ರೈತರ ಪರಿಹಾರದಲ್ಲಿ ತಾರತಮ್ಯ: ಹೋರಾಟದ ಎಚ್ಚರಿಕೆ ನೀಡಿದ ತೇಲ್ಕೂರ
Kalaburagi ರೈಲ್ವೇ ವಿಭಾಗೀಯ ಕಚೇರಿಗಾಗಿ ರೈಲು ತಡೆಗೆ ಯತ್ನ
Congress: ಸಿಎಂ, ಡಿಸಿಎಂ ನಡುವೆ ಅಧಿಕಾರ ಹಂಚಿಕೆಯ ಚರ್ಚೆಯೇ ಆಗಿಲ್ಲ: ಕೆ.ಜೆ.ಜಾರ್ಜ್
Kalaburagi: ಜ. 26ರಂದು ಸಿದ್ಧಲಿಂಗೇಶ್ವರ ಪ್ರಕಾಶನ 131 ಗ್ರಂಥಗಳು ಏಕಕಾಲಕ್ಕೆ ಬಿಡುಗಡೆ
Kalaburagi:ರೈಲ್ವೇ ವಿಭಾಗೀಯ ಕಚೇರಿಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ