Advertisement

ಡಿ.ಕೆ.ಸುರೇಶ್ ಬಂಧನಕ್ಕೆ ಒತ್ತಾಯಿಸಿ ರಾಮನಗರದಲ್ಲಿ ಬಿಜೆಪಿ ಪ್ರತಿಭಟನೆ

02:02 PM Jan 04, 2022 | Team Udayavani |

ರಾಮನಗರ: ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ರವಿಯವರನ್ನು ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಡೀಸಿ ಕಚೇರಿ ಮುಂಭಾಗ ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆಯಲ್ಲಿ ಧರಣಿ ಕುಳಿತ ಕಾರ್ಯಕರ್ತರು, ಸೋಮವಾರ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಲು ಮುಖ್ಯ ಮಂತ್ರಿಗಳು ಬಂದಿದ್ದ ಸಂದರ್ಭದಲ್ಲಿ ಅವರಿಗೆ ಅವಮಾನ ಮಾಡುವ ಉದ್ದೇಶದಿಂದಲೇ ಕಾಂಗ್ರೆಸ್ ಗೂಂಡಾಗಿರಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ:Covid ಹೆಚ್ಚಳ:ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಮನೆಯಿಂದಲೇ ಸರ್ಕಾರಿ ಸಿಬಂದಿಗಳ ಕೆಲಸ

ಸೋಮವಾರದ ಘಟನೆಗೆ ಡಿ‌.ಕೆ.ಸುರೇಶ್ ಕಾರಣ ಅವರನ್ನು ಬಂಧಿಸಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next