ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟಕ್ಕೆ ವಿಜಯಪುರ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಗಿದೆ.
ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ರ ನಗರದಲ್ಲಿ ಸಿಂದಗಿ ಕ್ರಾಸ್ ಬಳಿ ರೈತರು ಪ್ರತಿಭಟನೆ ನಡೆಸಿದರು.
ರೈತ ಪರ ವಿವಿಧ ಸಂಘಟನೆಗಳ ಕರೆಯ ಮೇರೆಗೆ ನಡೆದ ಪ್ರತಿಭಟನೆಯಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ತಲಕಾವೇರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಭಗವಾನರಡ್ಡಿ, ಭರತಕುಮಾರ, ಬಾಳು ಜೇವೂರ, ಸಿದ್ಧಲಿಂಗ ಬಾಗೇವಾಡಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಕೇಂದ್ರದ ಸರ್ಕಾರ ಜನ ವಿರೋಧಿ, ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಇದನ್ನು ವಿರೋಧಿಸಿ ದೆಹಲಿ ಹೊರ ಭಾಗದಲ್ಲಿ ರೈತರು ಎರಡು ತಿಂಗಳಿಂದ ನಿರಂತರವಾಗಿ ಶಾಂತ ರೀತಿಯ ಹೋರಾಟ ನಡೆಸಿದರೂ ಸ್ಪಂದಿಸುವ ಸೌಜನ್ಯ ತೋರಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು