Advertisement

ವಿದೇಶಿ ಹಾಲು ಅಮದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿಯೆದುರು ದನಗಳ ಜೊತೆ ಧರಣಿ

09:38 AM Oct 25, 2019 | Team Udayavani |

ಚಿಕ್ಕಬಳ್ಳಾಪುರ: ವಿದೇಶಿ ಹಾಲು ಅಮದು ಮಾಡಿಕೊಳ್ಳಲು ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸಹಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಸುಗಳೊಂದಿಗೆ ಪ್ರತಿಭಟನೆ ನಡೆಸಿದರು.

Advertisement

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳು ಕ್ಷೀರ ಕ್ರಾಂತಿಯಲ್ಲಿ ತೊಡಗಿವೆ. ಲಕ್ಷಾಂತರ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿವೆ. ಕೇಂದ್ರ ಸರ್ಕಾರ ಇದೀಗ ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸಹಿ ಮಾಡುವುದರಿಂದ ಬರ ಪೀಡಿತ ಜಿಲ್ಲೆಯ ರೈತರಿಗೆ ಸಾಕಷ್ಟು ತೊಂದರೆ ಅಗಲಿವೆ. ವಿಶ್ವ ಒಪ್ಪಂದಕ್ಕೆ ಸಹಿ ಹಾಕಿದರೆ ಜಿಲ್ಲೆಯ ಹೈನೋದ್ಯಮಕ್ಕೆ ತೀವ್ರ ಪೆಟ್ಟು ಬೀಳಲಿದೆ ಎಂದರು. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ವಿಶ್ವ ವಾಣಿಜ್ಯ ವ್ಯಾಪಾರಕ್ಕೆ ಸಹಿ ಹಾಕಬಾರದು ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಪ್ರಧಾನ ಕಾರ್ಯದರ್ಶಿ ವೆಂಕಟಸ್ವಾಮಿ, ವಿಭಾಗೀಯ ಕಾರ್ಯದರ್ಶಿ ಯಾಕೂಬ್ ಷರೀಪ್, ಶಿಡ್ಲಘಟ್ಟ ತಾಲೂಕಿನ ಕೋಚಿಮುಲ್ ಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next