ಬೆಳಗಾವಿ: ಕೇಂದ್ರ ಸರಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ನಡೆದ ರೈತರ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭಾರತೀಯ ಕೃಷಿಕ ಸಮಾಜ ಸಂಯುಕ್ತ ಸಂಘದ ರೈತರು ಸಿದ್ದಗೌಡ ಮೋದಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು.
ಪುಣೆ ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದ ನಡೆಯಿತು. ನಂತರ ಹಿರೇಬಾಗೇವಾಡಿ ಪೊಲೀಸರು ರೈತರನ್ನು ವಶಕ್ಕೆ ಪಡೆದರು.
ಇದನ್ನೂ ಓದಿ:ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಇದೇ ವೇಳೆ ರೈತ ಸಂಘದ ಆಯಿಷಾ ಸನದಿ ಅವರು ಬಾರುಕೋಲಿನಿಂದ ಹೊಡೆದುಕೊಳ್ಳುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು ಎಲ್ಲರ ಗಮನ ಸೆಳೆಯಿತು.