Advertisement

ಕೃಷಿ ಪತ್ತಿನ ಸಂಘದ ನೌಕರರಿಂದ ಪ್ರತಿಭಟನೆ

06:44 AM Feb 01, 2019 | |

ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಉದ್ಯೋಗಿಗಳಿಗೆ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಮುಂತಾದ ಸೌಲಭ್ಯಗಳಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಬ್ಯಾಂಕ್‌ಗಳ ಕ್ಷೇಮಾಭಿವೃದ್ಧಿ ಸಂಘ, ಆಳಂದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

Advertisement

ಸಂಘಗಳಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಯಾವುದೇ ರೀತಿಯ ಸೇವಾ ಭದ್ರತೆ ಹಾಗೂ ಸೌಲಭ್ಯಗಳು ನೌಕರರಿಗೆ ಇಲ್ಲ . ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರ ಸಂಘಗಳ ಮೂಲಕ ನೌಕರರು ರೈತರ ಆರ್ಥಿಕ ಅಭಿವೃದ್ಧಿಗೆ, ವ್ಯವಸಾಯ ಉಪಕರಣ, ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ, ಬೆಳೆ ವಿಮೆ, ಸರ್ಕಾರದ ಸಹಾಯ ಧನ, ಪಡಿತರ ವಿತರಣೆ, ಸರ್ಕಾರದ ಬೆಂಬಲ ಬೆಲೆ ಯೋಜನೆ ಜಾರಿ, ಸಾಲ ಮನ್ನಾದಂತ ಯೋಜನೆಗಳ ಜಾರಿಗೆ ನೌಕರರು ಹಗಲು-ರಾತ್ರಿ ದುಡಿದರೂ ಅದಕ್ಕೆ ತಕ್ಕ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರುವ ಬಜೆಟ್ ಅಧಿವೇಶನದಲ್ಲಾದರೂ ಬೇಡಿಕೆ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನೌಕರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next