ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದ್ದು, ಸೂಕ್ತ ಚಿಕಿತ್ಸೆ ಇಲ್ಲದೇ ಜನ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಆಸ್ಪತ್ರೆಗೆ ಸರ್ಕಾರ ಅಗತ್ಯ ಮೂಲ ಭೂತ ಸೌಲಭ್ಯ ಕಲ್ಪಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿ ರವಿ ಕುಮಾರ್ ತಿಳಿಸಿದರು.
ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಅನ್‌ಲಾಕ್ ಪ್ರಕ್ರಿಯೆ ಆರಂಭವಾದ ನಂತರ ಕೊರೊನಾ ಸಂಬಂಧಿಸಿದಯಾವುದೇ ಜವಾಬ್ದಾರಿಯನ್ನು ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ನಿರ್ವಹಿಸುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರು ಅಧಿಕಾರಿಗಳ ಸಭೆ ನಡೆಸುವುದಕ್ಕಷ್ಟೇ ಸೀಮಿತವಾಗಿದ್ದಾರೆಂದು ದೂರಿದರು.
ವಾಸ್ತವ ಸ್ಥಿತಿ ಬಗ್ಗೆ ಅಧಿಕಾರಿಗಳು ಒಂದು ದಿನವೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ನಗರದಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿ ದಿನಸುಮಾರು 100ಕ್ಕೂ ಹೆಚ್ಚು ಜನ ಕೋವಿಡ್ ಪರೀಕ್ಷೆಗಬರುತ್ತಾರೆ. ಆದರೆ ಸಿಬ್ಬಂದಿ ಕೊರತೆಯಿಂದ ಪರೀಕ್ಷೆ ಮಾಡಿಸಿಕೊಳ್ಳಲು ಇಡೀ ದಿನ ಕಾದು ಕುಳಿತುಕೊಳ್ಳಬೇಕು. ವರದಿ ಬರಲು3 ರಿಂದ 4 ದಿನ ಕಾಯುವಂತಾಗಿದೆ. ಪರೀಕ್ಷೆ ವರದಿ ಬಾರದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆನೀಡುತ್ತಿಲ್ಲ. ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೆ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಮುನೇಗೌಡ, ಕೊರೊನಾ ಸಂದರ್ಭದಲ್ಲಿ ತಾಲೂಕಿನ ಶಾಸಕ ಟಿ.ವೆಂಕಟರಮಣಯ್ಯ ಕಾಣೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ಕುರಿತು ಕಾಳಜಿ ಇಲ್ಲವಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣಕಷ್ಟೇಉಸ್ತುವಾರಿಸಚಿವರುಸೀಮಿತವಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹಾಗೂ ಸೌಲಭ್ಯಗಳ ಕೊರತೆಯಿಂದ ವೈದ್ಯಕೀಯ ಸಿಬ್ಬಂದಿ ತೀವ್ರ ಸಂಕಷ್ಟದಲ್ಲಿದ್ದಾರೆಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ವಕೀಲರ ಘಟಕದ ಜಿಲ್ಲಾ ಅಧ್ಯಕ್ಷ ಅಂಜನಗೌಡ, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಆರ್. ಕೆಂಪರಾಜ್, ಕಾರ್ಯದರ್ಶಿ ನಾಗರಾಜ್, ನಗರ ಕಾರ್ಯದರ್ಶಿ ಅಖೀಲೇಶ್ ಇದ್ದರು.