Advertisement

ಅತಿಥಿ ಉಪನ್ಯಾಸಕರಿಗೆ ವೇತನ ನೀಡದಿದ್ದರೆ ಹೋರಾಟ: ಹಕಾರಿ

02:15 PM Jul 04, 2020 | Suhan S |

ಹುಬ್ಬಳ್ಳಿ: ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದೆ ಸರಕಾರ ಸಂಪೂರ್ಣ ಕಡೆಗಣಿಸಿದ್ದು, ಇಲ್ಲಿಯವರೆಗೆ 8 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ದಿನದೊಳಗಾಗಿ ವೇತನ ಪಾವತಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಕರ್ನಾಟಕ ಶಿವಸೇನಾ ರಾಜ್ಯಾಧ್ಯಕ್ಷ ಕುಮಾರ ಹಕಾರಿ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್‌ ತಿಂಗಳಿನಿಂದ ಇಲ್ಲಿಯವರೆಗೆ ವೇತನ ಪಾವತಿ ಮಾಡಿಲ್ಲ. ಇದರಿಂದ ಜೀವನ ನಡೆಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯ ಸರಕಾರದ ಸಂಪೂರ್ಣ ವೈಫಲ್ಯವೇ ಇದಕ್ಕೆ ಕಾರಣವಾಗಿದೆ. ಕೋವಿಡ್‌-19 ಹೆಸರಲ್ಲಿ ಅತಿಥಿ ಉಪನ್ಯಾಸಕರನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ. ಉನ್ನತ ಶಿಕ್ಷಣ ಖಾತೆ ಸಚಿವ ಅಶ್ವತ್ಥ ನಾರಾಯಣ ಅವರು ಈ ಬಗ್ಗೆ ಗಮನ ಹರಿಸಿ 10 ದಿನದೊಳಗಾಗಿ ನಾಲ್ಕು ತಿಂಗಳ ವೇತನ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯ ಬಗ್ಗೆಯೂ ರಾಜ್ಯ ಸರಕಾರ ಗಮನ ಹರಿಸಬೇಕಾಗಿದೆ. ಆರ್ಥಿಕವಾಗಿ ಸದೃಢವಾಗಿರದ ಸಂಸ್ಥೆಗಳನ್ನು ಗುರುತಿಸಿ ಸಾಲದ ರೂಪದಲ್ಲಿ ನೀಡಿ ಸಿಬ್ಬಂದಿಗೆ ವೇತನ ಪಾವತಿಸುವಂತೆ ನೋಡಿಕೊಳ್ಳಬೇಕು. ಶಾಲೆಗಳು ಆರಂಭವಾದ ನಂತರ ನೀಡಿದ ಸಾಲ ಮರಳಿಪಡೆಯಬೇಕು. ಇನ್ನೂ ಖಾಸಗಿ ಕಂಪನಿಗಳಿಂದ ಉದ್ಯೋಗ ಕಳೆದುಕೊಂಡಿರುವವರಿಗೆ ಸರಕಾರ ಆಸರೆಯಾಗಬೇಕು. ಕೂಡಲೇ ಅನ್‌ಲೈನ್‌ ಶಿಕ್ಷಣ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ವಿನಾಯಕ ಮಾಳದಕರ, ಬಸವರಾಜ ಮಣ್ಣೂರಮಠ, ಉಮೇಶ ಬಾಂಡಗೆ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next